ಮಲ್ಲಿಕಾರ್ಜುನ ಖರ್ಗೆ 
ರಾಜ್ಯ

ವಿರೋಧ ಪಕ್ಷಗಳನ್ನು ಕೀಳಾಗಿ ಕಂಡರೆ ಜನರು ಸಹಿಸುವುದಿಲ್ಲ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಮತ್ತು ಶಾಸಕರೊಂದಿಗೆ ರಾಯಚೂರಿನಲ್ಲಿದ್ದ ಖರ್ಗೆ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು 'ಕ್ಷುಲ್ಲಕವಾಗಿ' ನೋಡುತ್ತಿದ್ದಾರೆ ಎಂದು ಸೋಮವಾರ ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕರೆಯಲಾದ ಸರ್ವಪಕ್ಷ ಸಭೆಗಳಿಗೆ ಪ್ರಧಾನಿಯವರ ಗೈರುಹಾಜರಿಯನ್ನು ಟೀಕಿಸಿದ್ದಾರೆ.

ಇಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿಯವರ ಗೈರು ವಿರೋಧ ಪಕ್ಷದ ಬಗ್ಗೆ ಅವರಿಗಿರುವ ಅಲ್ಪ ಗೌರವವನ್ನು ಪ್ರತಿಬಿಂಬಿಸುತ್ತದೆ. ದೇಶವು ಕಠಿಣ ಪರಿಸ್ಥಿತಿಯ ಮೂಲಕ ಸಾಗುತ್ತಿದೆ. ಇತ್ತೀಚೆಗೆ, ಪಾಕಿಸ್ತಾನಿ ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ 26 ಜನರನ್ನು ಕೊಂದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗಿನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿವೆ' ಎಂದು ಹೇಳಿದರು.

'ಇಡೀ ರಾಷ್ಟ್ರ ಮತ್ತು ಸಶಸ್ತ್ರ ಪಡೆಗಳು ದೇಶವನ್ನು ರಕ್ಷಿಸಲು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವಾಗ, ಕೆಲವು ವ್ಯಕ್ತಿಗಳು ವೈಯಕ್ತಿಕ ಶ್ರೇಯಸ್ಸು ಪಡೆಯಲು ಪ್ರಯತ್ನಿಸಿದ್ದಾರೆ. ಅವರು ಸೇನೆಯಲ್ಲಿ ಕ್ಯಾಪ್ಟನ್, ಕರ್ನಲ್ ಅಥವಾ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದರೆ, ದೇಶಕ್ಕಾಗಿ ಉತ್ತಮ ಕೆಲಸ ಮಾಡಿದ್ದಕ್ಕಾಗಿ ಮತ್ತು ಹೋರಾಡಿದ್ದಕ್ಕಾಗಿ ನಾವು ಅವರನ್ನು ಪ್ರಶಂಸಿಸುತ್ತಿದ್ದೆವು. ಆದರೆ ಅದು ಹಾಗಲ್ಲ' ಎಂದು ಖರ್ಗೆ ಯಾರನ್ನೂ ನೇರವಾಗಿ ಹೆಸರಿಸದೆ ಹೇಳಿದರು.

ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಮತ್ತು ಶಾಸಕರೊಂದಿಗೆ ರಾಯಚೂರಿನಲ್ಲಿದ್ದರು. ಅಲ್ಲಿ ಅವರು ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಯಚೂರು ವಿಶ್ವವಿದ್ಯಾಲಯದ ಮರುನಾಮಕರಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸರ್ವಪಕ್ಷ ಸಭೆಯನ್ನು ಕರೆಯುವಂತೆ ಒತ್ತಾಯಿಸಿದ ಮೊದಲ ಪಕ್ಷ ಕಾಂಗ್ರೆಸ್ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹೇಳಿದರು.

'ಎರಡು ಬಾರಿ ಸಭೆ ಕರೆಯಲಾಗಿತ್ತು. ಆದರೆ, ಪ್ರಧಾನಿಯವರು ಎರಡೂ ಸಂದರ್ಭಗಳಲ್ಲಿ ಹಾಜರಾಗಲು ವಿಫಲರಾದರು. ಅವರು ಏಕೆ ಹಾಜರಾಗಲಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ನಾಯಕರು ಸಭೆಯಲ್ಲಿ ಭಾಗವಹಿಸಲು ಪ್ರಮುಖ ಕಾರ್ಯಕ್ರಮಗಳನ್ನು ಬಿಟ್ಟು ಬಂದಿದ್ದರು. ಆದರೆ, ಪ್ರಧಾನಿಯವರು ದೇಶದಲ್ಲಿದ್ದರೂ ಹಾಜರಾಗದಿರಲು ನಿರ್ಧರಿಸಿದರು' ಎಂದು ತಿಳಿಸಿದರು.

'ಸರ್ಪಪಕ್ಷ ಸಭೆಯಲ್ಲಿ ಹಾಜರಾಗುವ ಬದಲಿಗೆ, ಮೋದಿ ಅವರು ಬಿಹಾರ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರು. ಅದರ ಅರ್ಥವೇನು? ದೇಶ ಮತ್ತು ಸೈನಿಕರು ಒಂದು ಕಡೆ ಹೋರಾಡುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ಮಾಡಲು ಆಯ್ಕೆ ಮಾಡಿಕೊಂಡರು. ಇದು ಸೂಕ್ತವಲ್ಲ. ಅಂತಹ ವರ್ತನೆ ಒಳ್ಳೆಯದಕ್ಕೆ ಸೂಚನೆ ನೀಡುವುದಿಲ್ಲ' ಎಂದು ಖರ್ಗೆ ಹೇಳಿದರು.

ನೀವು ವಿರೋಧ ಪಕ್ಷಗಳನ್ನು ಕೀಳಾಗಿ ಕಾಣುವಂತೆ ಮಾಡಲು ಪ್ರಯತ್ನಿಸಿದರೆ, ನಾಯಕರು, ಜನರು ಮತ್ತು ವಿಶೇಷವಾಗಿ ಈ ದೇಶದ ಯುವಕರು ಅದನ್ನು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ದೇಶದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.

'ಕೆಲವು ಅಸೂಯೆ ಪಟ್ಟ ನಾಯಕರು ಮತ್ತು ರಾಜಕೀಯ ಪಕ್ಷಗಳು ನಮ್ಮ ಭರವಸೆಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಆದರೆ, ಅವರು ತಮ್ಮ ಪ್ರಯತ್ನಗಳಲ್ಲಿ ಯಶಸ್ವಿಯಾಗುವುದಿಲ್ಲ. ಮಹಿಳೆಯರು ಮತ್ತು ಇತರ ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡಿದ ಕಲ್ಯಾಣ ಕಾರ್ಯಕ್ರಮಗಳನ್ನು ಟೀಕಿಸುವುದು ಮತ್ತು ಮಾನಹಾನಿ ಮಾಡುವುದರಿಂದ ಜನರನ್ನು ಮೆಚ್ಚಿಸಲು ಸಾಧ್ಯವಿಲ್ಲ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT