ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಸ್ತಿ ವಿವಾದ; ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ!

ಆಕೆಯ ಪತಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ಚರ್ಚಿಸಿದ ನಂತರ 10 ಗುಂಟೆ ಭೂಮಿಯನ್ನು ಸಂಬಂಧಿಕರಿಗೆ ವರ್ಗಾಯಿಸಿದ್ದು. ಪತಿ ತನಗೆ ತಿಳಿಸದೆ ಆಸ್ತಿ ವರ್ಗಾವಣೆ ಮಾಡಿದ್ದರಿಂದ ಮಾಲಾ ಅಸಮಾಧಾನಗೊಂಡಿದ್ದರು.

ಬೆಂಗಳೂರು: ಮಹಿಳೆಯೊಬ್ಬರು ತನ್ನ ಎಂಟು ವರ್ಷದ ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ, ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ಗೃಹಿಣಿ ಮಾಲಾ (30) ಮತ್ತು ಖಾಸಗಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅವರ ಕಿರಿಯ ಮಗಳು ಅನುಶ್ರೀ (8) ಎಂದು ಗುರುತಿಸಲಾಗಿದೆ. ಮಾಲಾ ಅವರ ಪತಿ ಮತ್ತು 10 ವರ್ಷದ ಮಗಳು ಬದುಕುಳಿದಿದ್ದಾರೆ.

ಮನೆಯಲ್ಲಿ ಆಸ್ತಿ ವಿವಾದದ ನಂತರ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಆಕೆಯ ಪತಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ಚರ್ಚಿಸಿದ ನಂತರ 10 ಗುಂಟೆ ಭೂಮಿಯನ್ನು ಸಂಬಂಧಿಕರಿಗೆ ವರ್ಗಾಯಿಸಿದ್ದು. ಪತಿ ತನಗೆ ತಿಳಿಸದೆ ಆಸ್ತಿ ವರ್ಗಾವಣೆ ಮಾಡಿದ್ದರಿಂದ ಮಾಲಾ ಅಸಮಾಧಾನಗೊಂಡಿದ್ದರು, ಇದು ಜಗಳಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ, ಮಾಲಾ ಮತ್ತು ಅನುಶ್ರೀ ಇಬ್ಬರೂ ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬ ಸದಸ್ಯರು ಅವರನ್ನು ಹುಡುಕಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಕೃಷಿ ಹೊಂಡದಲ್ಲಿ ಅವರ ಶವಗಳು ತೇಲುತ್ತಿರುವುದನ್ನು ಅವರು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಮಹಿಳೆಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಆಕೆಯ ಪತಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ