ನೇರಳೆ ಹಣ್ಣು  
ರಾಜ್ಯ

ನೇರಳೆ ಹಣ್ಣು ಲಂಡನ್ ಗೆ ರಫ್ತು: ಸಾಂಪ್ರದಾಯಿಕ ಹಣ್ಣಿಗೆ ಜಾಗತಿಕ ಮಾರುಕಟ್ಟೆ

ನೇರಳೆ ಹಣ್ಣಿಗೆ ಈಗ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಲಂಡನ್ ಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತದೆ.

ಬೆಂಗಳೂರು: ಬೇಸಿಗೆ ಕಾಲದಲ್ಲಿ ಫಲ ಬಿಡುವ ನೇರಳೆ ಹಣ್ಣು ತಿನ್ನಲು ಬಲು ರುಚಿ ಜೊತೆಗೆ ಇದರಲ್ಲಿ ಹಲವಾರು ಔಷಧೀಯ ಗುಣಗಳು ಕೂಡ ಇವೆ.

ನೇರಳೆ ಹಣ್ಣು ಒಂದು ಸೀಸನಲ್‌ ಹಣ್ಣಾಗಿದ್ದು, ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ಜನರು ಇಷ್ಟಪಡುತ್ತಾರೆ. ಮಾರುಕಟ್ಟೆಯಲ್ಲಿ ಇದಕ್ಕೆ ಬೆಲೆ ಸ್ವಲ್ಪ ಹೆಚ್ಚು. ಹಳ್ಳಿ ಭಾಗಗಳಲ್ಲಿ ಗುಡ್ಡಗಳಲ್ಲಿ ನೇರಳೆ ಹಣ್ಣಿನ ಮರಗಳಿರುವುದು ಸಾಮಾನ್ಯ.

ಇಂತಹ ನೇರಳೆ ಹಣ್ಣಿಗೆ ಈಗ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಲಂಡನ್ ಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತದೆ.

ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆಯಾಗಿರುವ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು(APEDA) ಕರ್ನಾಟಕದಿಂದ ಲಂಡನ್ ಗೆ ತಾಜಾ ನೇರಳೆ ಹಣ್ಣುಗಳ ರಫ್ತಿಗೆ ಚಾಲನೆ ನೀಡಿದೆ.

ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!