ವೈರಲ್ ಆಗಿರುವ ಪತ್ರ 
ರಾಜ್ಯ

ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ-ಕೊಲೆ; ಪಾಪ ಪ್ರಜ್ಞೆ ಪರಿಹರಿಸಿಕೊಳ್ಳಲು ಶರಣಾಗುತ್ತೇನೆಂದ ವ್ಯಕ್ತಿ; ಪತ್ರ ವೈರಲ್

'ಸಾರ್ವಜನಿಕರ ಮಾಹಿತಿಗಾಗಿ' ಎಂದು ಬರೆಯಲಾಗಿರುವ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ.

ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ. ಇತ್ತೀಚೆಗೆ ಹೊರತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ" ಎಂದು ಉಲ್ಲೇಖಿಸಲಾಗಿದೆ.

'ಸಾರ್ವಜನಿಕರ ಮಾಹಿತಿಗಾಗಿ' ಎಂದು ಬರೆಯಲಾಗಿರುವ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪತ್ರ ವೈರಲ್ ಆದ ಬೆನ್ನಲ್ಲೆ ದಕ್ಷಿಣ ಕನ್ನಡ ಪೊಲೀಲ್ ಇಲಾಖೆ ವತಿಯಿಂದ ಪ್ರಕಟಣೆ ನೀಡಲಾಗಿದ್ದು, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ. ಸದರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಠಾಣೆಗೆ ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ.

ಅದರಂತೆ ಸದರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT