ಸಾಂದರ್ಭಿಕ ಚಿತ್ರ 
ರಾಜ್ಯ

ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ

ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್‌ಪಿ, ಒಬ್ಬ ಡಿವೈಎಸ್‌ಪಿ, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮನವಿ ಮಾಡಿದ್ದರು.

ಬೆಂಗಳೂರು: ಲೋಕಾಯುಕ್ತದಲ್ಲಿ ಜಾಗೃತ ದಳದ ರಚನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಕಾರಣ, ಭ್ರಷ್ಟಾಚಾರ ನಿಗ್ರಹ ದಳವು ತನ್ನದೇ ಆದ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡಲು ಒಂದು ವಿಭಾಗವನ್ನು ಸ್ಥಾಪಿಸಲು ಮುಂದಾಗಿದೆ.

ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್‌ಪಿ, ಒಬ್ಬ ಡಿವೈಎಸ್‌ಪಿ, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮನವಿ ಮಾಡಿದ್ದರು.

ಇದರ ಹೊರತಾಗಿ, ಇಡೀ ಲೋಕಾಯುಕ್ತಕ್ಕೆ ಕಳೆದ ಅಕ್ಟೋಬರ್‌ನಲ್ಲಿ 339 ಹುದ್ದೆಗಳನ್ನು ಮಂಜೂರು ಮಾಡುವಂತೆ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಸರ್ಕಾರದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ, ನಾವು ರಿಜಿಸ್ಟ್ರಾರ್ ನೇತೃತ್ವದಲ್ಲಿ ಜಾಗೃತ ದಳವನ್ನು ರಚಿಸಿದ್ದೇವೆ ಎಂದು ನ್ಯಾಯಮೂರ್ತಿ ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಸಂಸ್ಥೆಯು ಸುಮಾರು 25,000 ಪ್ರಕರಣಗಳನ್ನು ನಿರ್ವಹಿಸುತ್ತಿದೆ. ಲೋಕಾಯುಕ್ತ ಸಂಸ್ಥೆಗೆ ಒಟ್ಟು1,929 ಸಿಬ್ಬಂದಿ ಅಗತ್ಯವಿದೆ, ಆದರೆ ಸದ್ಯ 1,309 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ACB) ದಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರವು 120 ಸಿಬ್ಬಂದಿಯೊಂದಿಗೆ ಅದಕ್ಕೆ ವರ್ಗಾಯಿಸಿತು. ACB ರಚನೆಯ ನಂತರ ರದ್ದುಗೊಂಡ ಜಾಗೃತ ದಳವನ್ನು ಸ್ಥಾಪಿಸಲು ಅಸ್ತಿತ್ವದಲ್ಲಿರುವ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಕೇಳಲಾಯಿತು.

ಲೋಕಾಯುಕ್ತದ ಪ್ರಧಾನ ಕಚೇರಿ ಮತ್ತು ಜಿಲ್ಲಾ ಕಚೇರಿಗಳಿಗೆ ACB ಸಿಬ್ಬಂದಿಯನ್ನು ಪುನರ್ವಿತರಣೆ ಮಾಡಲಾಗಿದ್ದು ಮತ್ತು ಅನೇಕ ಹುದ್ದೆಗಳು ಖಾಲಿಯಿರುವುದರಿಂದ, ಜಾಗೃತ ದಳವನ್ನು ರಚಿಸಲಾಗಲಿಲ್ಲ.

ಐಪಿಎಸ್ ಅಧಿಕಾರಿ, ಮಾಜಿ ಎಸ್ಪಿ ಶ್ರೀನಾಥ್ ಎಂ ಜೋಶಿ ಅವರು ಸರ್ಕಾರಿ ಅಧಿಕಾರಿಗಳನ್ನು ಸುಲಿಗೆ ಮಾಡುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಪ್ರಾಥಮಿಕವಾಗಿ ಬೆಳಕಿಗೆ ಬಂದ ನಂತರ, ನಾನು ಪೊಲೀಸ್ ಅಧಿಕಾರಿಗಳೊಂದಿಗೆ ವ್ಯವಹರಿಸುವುದನ್ನು ನಿಲ್ಲಿಸಿದ್ದೇನೆ.

ADGP ಮತ್ತು IGP ಯನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪೊಲೀಸ್ ವಿಭಾಗವನ್ನು ಸುಗಮಗೊಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ನ್ಯಾಯಮೂರ್ತಿ ಪಾಟೀಲ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ನ್ಯಾಯಮಂಡಳಿಗಳು, ವಿಚಾರಣಾ ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಸುಮಾರು 3,000 ಪ್ರಕರಣಗಳನ್ನು ನಿರ್ವಹಿಸುತ್ತಿರುವ ಲೋಕಾಯುಕ್ತದ ಕಾನೂನು ಕೋಶವು ಅಗತ್ಯ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು, ಇದನ್ನು ಲೋಕಾಯುಕ್ತ ಸಂಸ್ಥೆಯು ಸ್ವೀಕರಿಸಬೇಕು ಮತ್ತು ಪರಿಶೀಲಿಸಬೇಕು, ಏಕೆಂದರೆ ಇದಕ್ಕೆ ಹೆಚ್ಚಿನ ಮಾನವಶಕ್ತಿ ಬೇಕಾಗುತ್ತದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ಗದಗ, ಹಾವೇರಿ, ವಿಜಯನಗರ, ಮಡಿಕೇರಿ, ಕೊಪ್ಪಳ ಮತ್ತು ಉಡುಪಿಯಂತಹ ಒಂಬತ್ತು ಜಿಲ್ಲೆಗಳಿಗೆ ರಾಜ್ಯ ಸರ್ಕಾರವು ಯಾವುದೇ ಎಸ್‌ಪಿ ಹುದ್ದೆಗಳನ್ನು ಮಂಜೂರು ಮಾಡಿಲ್ಲ. 38 ಪೊಲೀಸ್ ಅಧಿಕಾರಿಗಳಿಗೆ 44 ವಾಹನಗಳನ್ನು ಖರೀದಿಸಲು 4.44 ಕೋಟಿ ರೂ.ಗಳ ಮಂಜೂರಾತಿಗೆ ಲೋಕಾಯುಕ್ತರು ಸಲ್ಲಿಸಿದ ಮನವಿಯೂ ಇನ್ನೂ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT