ಪರಮೇಶ್ವರ್, ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಶಾಸಕರಷ್ಟೇ ಅಲ್ಲ ಪ್ರಭಾವಿ ಸಚಿವರಿಂದಲೂ 'ದುಡ್ಡಿಲ್ಲ' ಮಾತು; ರಾಜ್ಯದ ಆರ್ಥಿಕ ದಿವಾಳಿತನಕ್ಕೆ ಹಿಡಿದ ಕನ್ನಡಿ- ಪ್ರಲ್ಹಾದ್ ಜೋಶಿ!

ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಜೋಶಿ ಕಿಡಿ ಕಾರಿದ್ದಾರೆ.

ನವದೆಹಲಿ: ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಶಾಸಕರ ಜತೆ ಈಗ ಖುದ್ದು ಗೃಹ ಸಚಿವ ಪರಮೇಶ್ವರ್‌ ಅವರೇ ಕನ್ನಡಿ ಹಿಡಿದಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಬಾದಾಮಿಯಲ್ಲಿ ಗೃಹ ಸಚಿವರು, ಅಭಿವೃದ್ಧಿಗೆ ಸಿದ್ದರಾಮಣ್ಣನ ಹತ್ತಿರ ದುಡ್ಡಿಲ್ಲʼ ಎನ್ನುವ ಮೂಲಕ ಹಳ್ಳ ಹಿಡಿದ ರಾಜ್ಯದ ಆರ್ಥಿಕ ಸ್ಥಿತಿಗತಿಯನ್ನು ತೆರೆದಿಟ್ಟಿದ್ದಾರೆ. ರಾಜ್ಯ ಬೊಕ್ಕಸ ಬರಿದಾಗಿರುವ ಸತ್ಯ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಇನ್ನಾದರೂ ತಮ್ಮ ಆಡಳಿತ ವೈಫಲ್ಯವನ್ನು ಒಪ್ಪಿಕೊಳ್ಳಿ ಎಂದು ಸಿಎಂಗೆ ಚಾಟಿ ಬೀಸಿದ್ದಾರೆ.

ತಾವೊಬ್ಬ ಆರ್ಥಿಕ ತಜ್ಞವೆಂದೇ ಬಿಂಬಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್ಥಿಕ ಸುಭಿಕ್ಷವಾಗಿದ್ದ ಕರ್ನಾಟಕವನ್ನು ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಜೋಶಿ ಕಿಡಿ ಕಾರಿದ್ದಾರೆ.

ಭ್ರಷ್ಟಾಚಾರದಲ್ಲಿ ರಾಜ್ಯ ನಂ.1: ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ದಿವಾಳಿಯಾಗಲಿದೆ ಎಂಬ ಸತ್ಯವನ್ನು ಸ್ವತಃ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದರು. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ʼಹಣ ವಸೂಲಿ ಆದ ಮೇಲೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡ್ತೀವಿʼ ಎಂಬ ಅಹಂಕಾರದ ಮಾತು ರಾಜ್ಯದ ಆರ್ಥಿಕತೆ ಅಧಃಪತನಕ್ಕೆ ಸಾಕ್ಷಿಯಾಗಿತ್ತೆಂದು ಪ್ರತಿಕ್ರಿಯಿಸಿದ್ದಾರೆ.

ಸಿಎಂ ಆಪ್ತರಾಗಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಸಹ ಅಭಿವೃದ್ಧಿಗೆ ಹಣವಿಲ್ಲ ಎಂದೇ ಹೇಳಿದ್ದರು. ಬಳಿಕ ವಸತಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಶಾಸಕ‌ ಬಿ.ಆರ್.ಪಾಟೀಲ್ ಎಳೆ ಎಳೆಯಾಗಿ ಬಿಚ್ಚಿಟ್ಟು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಬೆತ್ತಲು ಮಾಡಿದರು. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ವಸತಿ ಸಚಿವ ಜಮೀರ್‌ ಅಹ್ಮದ್‌ ಬಗ್ಗೆ ಮೃದು ಧೋರಣೆ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನು, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದಿರುವ ಶಾಸಕ ರಾಜು ಕಾಗೆ ಅವರಂತೂ ಒಂದು ಹೆಜ್ಜೆ ಮುಂದೆ ಹೋಗಿ ರಾಜೀನಾಮೆಯ ಮಾತನಾಡಿದ್ದಾರೆ. ಸಾಲದ್ದಕ್ಕೆ ʼಒಂದು ಚರಂಡಿ ನಿರ್ಮಿಸಲೂ ಅನುದಾನ ಸಿಗುತ್ತಿಲ್ಲʼ ಎಂದು ಮತ್ತೊಬ್ಬ ಶಾಸಕ ಎನ್.‌ವೈ.ಗೋಪಾಲಕೃಷ್ಣ ಹೇಳಿದ್ದಾರೆ. ಸರ್ಕಾರದ ದಿವಾಳಿತನಕ್ಕೆ ನಿದರ್ಶನವಾಗಿ ಇನ್ನೆಷ್ಟು ಶಾಸಕರ ಅಸಮಾಧಾನ ಸ್ಪೋಟಗೊಳ್ಳಬೇಕು? ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT