ಈಶ್ವರ್ ಖಂಡ್ರೆ 
ರಾಜ್ಯ

ಪಶ್ಚಿಮ ಘಟ್ಟಗಳ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ

ಮೂಲಸೌಕರ್ಯ, ಗಣಿಗಾರಿಕೆ, ವಾಣಿಜ್ಯ, ವಸತಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಂದಾಗಿ ಈ ಪ್ರದೇಶದ ಮೇಲೆ ಹೆಚ್ಚುತ್ತಿರುವ ಒತ್ತಡದಿಂದಾಗಿ ಈ ಆದೇಶಗಳನ್ನು ಹೊರಡಿಸಲಾಗಿದೆ.

ಬೆಂಗಳೂರು: ಪಶ್ಚಿಮಘಟ್ಟದ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಮೂಲಸೌಕರ್ಯ, ಗಣಿಗಾರಿಕೆ, ವಾಣಿಜ್ಯ, ವಸತಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಂದಾಗಿ ಈ ಪ್ರದೇಶದ ಮೇಲೆ ಹೆಚ್ಚುತ್ತಿರುವ ಒತ್ತಡದಿಂದಾಗಿ ಈ ಆದೇಶಗಳನ್ನು ಹೊರಡಿಸಲಾಗಿದೆ. ಯುನೆಸ್ಕೋದಿಂದ ಜೀವವೈವಿಧ್ಯ ತಾಣವೆಂದು ಘೋಷಿಸಲ್ಪಟ್ಟ ನಂತರ ಈ ಪ್ರದೇಶದ ಮೊದಲ ಅಧ್ಯಯನ ಇದಾಗಿದೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಬುಧವಾರ ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಉತ್ತರ ಕನ್ನಡ ಪ್ರದೇಶ ಮತ್ತು ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ನಡೆಸಲಾದ ಸಾಗಣೆ ಸಾಮರ್ಥ್ಯ ಅಧ್ಯಯನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಜೀವವೈವಿಧ್ಯ ಸಮಿತಿಯ ಸದಸ್ಯರು ತಿಳಿಸಿದ್ದಾರೆ.

ಅಧ್ಯಯನಕ್ಕೆ ಭಾಗವಹಿಸುವ ವಿಧಾನದ ಅಗತ್ಯವನ್ನು ಚರ್ಚಿಸಲಾಯಿತು. ಸಾಗಣೆ ಸಾಮರ್ಥ್ಯದ ಮಿತಿಯನ್ನು ನಿಗದಿಪಡಿಸಬೇಕಾದರೆ, ಪ್ರಾಯೋಗಿಕ ದತ್ತಾಂಶದ ಅಗತ್ಯವಿದೆ ಮತ್ತು ಅದನ್ನು ಹೇಗೆ ಸಂಗ್ರಹಿಸಬೇಕು ಮತ್ತು ಒಟ್ಟುಗೂಡಿಸಬೇಕು ಎಂಬುದರ ಕುರಿತು ಚರ್ಚಿಸಲಾಯಿತು” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದರು.

ಪಶ್ಚಿಮ ಘಟ್ಟಗಳನ್ನು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ತೆರೆಯುವುದರಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳು ಎದುರಾಗುತ್ತಿವೆ. ಈಗ ಅಲ್ಪಾವಧಿಯಲ್ಲಿ ಭಾರೀ ಮಳೆ, ಭೂಕುಸಿತಗಳು ಮತ್ತು ಕಡಿಮೆ ಮಣ್ಣಿನ ಗುಣಮಟ್ಟದಿಂದ ಸಮಸ್ಯೆಗಳು ಎಂದುರಾಗಿವೆ ಎಂದು ಹೇಳಿದ್ದಾರೆ. ಯೋಜನೆಗಳಿಗೆ ಪರಿಸರ ಇಲಾಖೆ ಅನುಮತಿ ನೀಡಿದಾಗ ಅನೇಕ ಎಚ್ಚರಿಕೆಗಳನ್ನು ನೀಡಲಾಗುತ್ತದೆ. ಆದರೆ ಅವುಗಳನ್ನು ಪಾಲಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಇಲ್ಲಿಯವರೆಗೆ ಯಾವ ಪರಿಣಾಮವನ್ನು ಅಧ್ಯಯನ ಮಾಡಲಾಗಿಲ್ಲ. ಈ ಸಾಗಿಸುವ ಸಾಮರ್ಥ್ಯ ವರದಿಯು ಅಂತಹ ಎಲ್ಲಾ ವಿವರಗಳನ್ನು ಒಳಗೊಂಡಿರುತ್ತದೆ ಎಂದು ಮತ್ತೊಬ್ಬ ಸಮಿತಿ ಸದಸ್ಯರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT