ಸರಗಳ್ಳತನಕ್ಕೆ ಯತ್ನದ ಚಿತ್ರ 
ರಾಜ್ಯ

ಕೋಲಾರ: ಹಾಡಹಗಲೇ ಮಹಿಳೆಯನ್ನು ಅಟ್ಟಾಡಿಸಿ ಸರಗಳ್ಳತನಕ್ಕೆ ದುಷ್ಕರ್ಮಿಗಳು ಯತ್ನ!

ಖಾಲಿ ನಿವೇಶನವೊಂದರ ಬಳಿ ಮಹಿಳೆ ಸ್ಕೂಟಿ ನಿಲ್ಲಿಸುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಕೋಲಾರ: ಹಾಡಹಗಲೇ ಮಹಿಳೆಯನ್ನು ಅಟ್ಟಾಡಿಸಿದ ದುಷ್ಕರ್ಮಿಗಳು ಸರಗಳ್ಳತನಕ್ಕೆ ಯತ್ನಿಸಿರುವ ಘಟನೆ ಮುಳಬಾಗಿಲಿನ ಸಂಜಪ್ಪ ಬಡಾವಣೆಯಲ್ಲಿ ನಡೆದಿದೆ.

ಖಾಲಿ ನಿವೇಶನವೊಂದರ ಬಳಿ ಮಹಿಳೆ ಸ್ಕೂಟಿ ನಿಲ್ಲಿಸುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಓರ್ವ ಬೈಕ್ ಮೇಲೆ ಕುಳಿತಿದ್ದರೆ, ಮತ್ತೋರ್ವ ಮಹಿಳೆಯನ್ನು ಅಟ್ಟಾಡಿಸಿದ್ದು, ಕುತ್ತಿಗೆಗೆ ಹಾಕಿ ಸರ ದೋಚಲು ಯತ್ನಿಸಿದ್ದಾನೆ.

ನಂತರ ಮಹಿಳೆ ಕಿರುಚಲು ಪ್ರಾರಂಭಿಸಿದ್ದಾಗ, ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುತ್ತಿದ್ದಂತೆಯೇ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಭಯಾನಕ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನಿಖಾಧಿಕಾರಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ಸಂಬಂಧ ದರೋಡೆಗೆ ಯತ್ನಕ್ಕೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಸುಳಿವಿಗಾಗಿ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ, ದುಷ್ಕರ್ಮಿಗಳ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಕೋಲಾರದ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್