ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಡ ಪ್ರಭುವಾಗಲಿ ಎಂದು ಹಾರೈಸಿದ್ದಾರೆ.
ಇಂದು ಡಾ. ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಡಿಕೆ ಶಿವಕುಮಾರ್ ನಾಡ ಪ್ರಭುವಾಗಲಿ ಎಂಬುದು ನಮ್ಮೆಲ್ಲರ ಆಶಯ. ರಾಜ್ಯವನ್ನು ಮುನ್ನಡೆಸುವ ಶಕ್ತಿ ಡಿಕೆ ಶಿವಕುಮಾರ್ ಅವರಿಗೆ ಸಿಗಲಿ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಛಲ ಬಿಡದೇ ಯಾವುದೇ ಕೆಲಸವನ್ನು ಮಾಡಿ ತೋರಿಸುವಂತವರು. ಅಂತಹ ನಾಯಕ ನಾಡ ಪ್ರಭುವಾಗಲಿ ಎಂಬುದು ನಮ್ಮೇಲ್ಲರ ಆಶಯ ಎಂದರು.