ಕಲಬುರಗಿ: ಮುಸ್ಲಿಂ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದಿರುವಂತಹ ಘಟನೆ ಕಲಬುರಗಿಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಬೈಲಪ್ಪ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ತಮ್ಮ ಬೈಕ್ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಆದಿಲ್, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಎಂಬುವರನ್ನು ಬಂಧಿಸಿದ್ದಾರೆ.