ತುಮಕೂರು: ಯೂಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿದ್ದು ದಂಪತಿ ಹಾಗೂ ಮಕ್ಕಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್ ನವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.