ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿ, 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬಯಲಿಗೆ ಬಂದಿದ್ದು, ಮಹಿಳೆಯನ್ನು ಕೊಂದು ಹಾಕಿರುವ ದುಷ್ಕರ್ಮಿಗಳು ಶವವನ್ನು ಮೂಟೆಕಟ್ಟಿ ಕಸದ ಲಾರಿಗೆ ಹಾಕಿದ್ದಾರೆ.
ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಘಟನೆ ವರದಿಯಾಗಿದ್ದು, ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಜಾತಿ ಗಣತಿ ಸಮೀಕ್ಷೆ ವೇಳೆ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ವಲಯ ಆಯುಕ್ತರು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ತಂಡವು ಜಾತಿ ಗಣತಿ ಸಮೀಕ್ಷೆಗಾಗಿ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಬಹುಮಹಡಿ ವಸತಿ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ನಿವಾಸಿಯಾಗಿರುವ ಮಹಿಳೆಯೊಬ್ಬರು ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದು, ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ. 6ನೇ ಸೆಕ್ಟರ್‌ನ ಎಚ್‌ಎಸ್‌ಆರ್ ಲೇಔಟ್‌ನ 9ನೇ ಮುಖ್ಯ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್ ಸಂಖ್ಯೆ 402 ರಲ್ಲಿ ವಾಸಿಸುವ ಕೆ. ಪವಿತ್ರಾ ವಿರುದ್ಧ ವಲಯ ಆಯುಕ್ತರು ಬುಧವಾರ ದೂರು ದಾಖಲಿಸಿದ್ದಾರೆ. ಬುಧವಾರ ದೂರು ದಾಖಲಿಸಲಾಗಿದದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಈವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಮಹಿಳೆಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ ಹೇರುತ್ತಲೇ ಇತ್ತ ಆಟೋ ಚಾಲಕರ ದುಬಾರಿ ಹಣ ವಸೂಲಿ ಪ್ರಕರಣಗಳೂ ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಆಟೋ ಚಾಲಕರಿಗೆ ಸರ್ಕಾರ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಮೀಟರ್ ಹಾಕದೇ ದುಬಾರಿ ಹಣ ಕೇಳುತ್ತಿರುವ ಆಟೋ ಚಾಲಕರ ವಿರುದ್ಧ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. 2-3 ಕಿ.ಮೀ ದೂರದ ಹತ್ತಿರದ ಸ್ಥಳಗಳಿಗೂ ಆಟೋ ಚಾಲಕರು 200 300 ರೂಗಳನ್ನುಕೇಳುತ್ತಿದ್ದಾರೆ ಎಂದು ಗ್ರಾಹಕರು ಆರೋಪಿಸುತ್ತಿದ್ದು ದೂರುಗಳ ಹಿನ್ನಲೆಯಲ್ಲಿ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಪ್ ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು' ಎಂದು ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತದಿಂದ ಸಾವಿಗೀಡಾಗುತ್ತಿದ್ದಾರೆ. ಹಾಸನ ಜಿಲ್ಲೆಯೊಂದರಲ್ಲೇ ಕಳೆದ 39 ದಿನಗಳಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೆಚ್ಚುತ್ತಿರುವ ಹೃದಯಘಾತಗಳ ಬಗ್ಗೆ ಸಂಸದ, ಹೃದಯ ತಜ್ಞ ಡಾ. ಸಿಎನ್ ಮಂಜುನಾಥ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಲಿದ್ದಾರೆ. ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಎದೆ ನೋವಿನಿಂದ ಬಳಲಿ ಬಂದವರಿಗೆ ಜಯದೇವ ಆಸ್ಪತ್ರೆ ಸಹಯೋಗ ದೊಂದಿಗೆ ಚಿಕಿತ್ಸೆ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಎದೆ ನೋವು ಎಂದು ಬಂದ ರೋಗಿಗಳ ಇಸಿಜಿ ರಿಪೋರ್ಟ್ ಜಯದೇವ ಆಸ್ಪತ್ರೆಗೆ ಅಪ್ಲೋಡ್ ಮಾಡಲಾಗುತ್ತದೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ಹೃದಯಾಘಾತಕ್ಕೆ ತ್ವರಿತ ಚಿಕಿತ್ಸೆಗೆ ಸ್ಟೆಮಿ ಸಹಾಯಕವಾಗಲಿದೆ.