ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಿವಾಸಿಗಳು 
ರಾಜ್ಯ

ಬೆಂಗಳೂರು: ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯ, ನಿವಾಸಿಗಳ ವಿನೂತನ ಪ್ರತಿಭಟನೆ!

ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿರುವುದರಿಂದ ನಿವಾಸಿಗಳು ಈ ಮೂಲಕ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.

ಬೆಂಗಳೂರು: ತಮ್ಮ ಪ್ರದೇಶದ ರಸ್ತೆಯ ದಯನೀಯ ಸ್ಥಿತಿಯಿಂದ ಬೇಸತ್ತ ಹಾಲಿಡೇ ವಿಲೇಜ್ ರಸ್ತೆಯ ನಿವಾಸಿಗಳು ಭಾನುವಾರ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಗಣ ಹೋಮ (ಅಗ್ನಿ ವಿಧಿ) ನಡೆಸಲು ಯೋಜಿಸಿದ್ದರು.

ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತವಾಗಿರುವುದರಿಂದ ನಿವಾಸಿಗಳು ಈ ಮೂಲಕ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ರಾಜಕೀಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮವನ್ನು ನಿರ್ಬಂಧಿಸಲಾಗಿದೆ. ಆದಾಗ್ಯೂ, ಸಣ್ಣ ಪ್ರಮಾಣದಲ್ಲಿ ಪೂಜೆ ನಡೆಸಿದರು.

ಈ ಕುರಿತು TNIE ಜೊತೆಗೆ ಮಾತನಾಡಿದ ನಿವಾಸಿ ಮನೀಶ್ ಶುಕ್ಲಾ, ಭಾನುವಾರ HV ರಸ್ತೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ಹೋಮ ಕಾರ್ಯಕ್ರಮ ಇಟ್ಟುಕೊಂಡಿದ್ದೇವು. ಆದರೆ ದೇವಸ್ಥಾನದಲ್ಲಿ ಇದನ್ನು ಮಾಡದಂತೆ ಎರಡು ದಿನಗಳ ಹಿಂದೆ ನಿರ್ದೇಶನ ಬಂದಿರುವುದಾಗಿ ಆರ್ಚಕರು ಹೇಳಿದರು.ಬಹುಶ: ರಾಜಕೀಯ ಒತ್ತಡವೇ ಇದಕ್ಕೆ ಕಾರಣವಾಗಿರಬಹುದು ಎಂದರು.

ಮುಖ್ಯರಸ್ತೆ, ಶಾಲಾ-ಕಾಲೇಜುಗಳು ಮತ್ತು ವಸತಿ ಸಮುದಾಯಗಳಿಗೆ ಸಂಪರ್ಕ ಕಲ್ಪಿಸುವ 2.3-ಕಿಮೀ ಉದ್ದದ ರಸ್ತೆಯನ್ನು ಪೈಪ್‌ಲೈನ್ ಕಾಮಗಾರಿಗಾಗಿ ಹಲವು ಬಾರಿ ಅಗೆಯಲಾಗಿದೆ. ಆದರೆ ಸರಿಪಡಿಸಿಲ್ಲ. ಕಳೆದ ಆರು ತಿಂಗಳ ಹಿಂದೆಯೇ ರಸ್ತೆಗೆ ವೈಟ್‌ಟಾಪಿಂಗ್‌ ಘೋಷಣೆ ಮಾಡಲಾಗಿದ್ದು, ಅಸಮರ್ಪಕ ಗುತ್ತಿಗೆದಾರರು ಮತ್ತು ಅಸಮರ್ಪಕ ಮೇಲ್ವಿಚಾರಣೆಯಿಂದ ಸ್ವಲ್ಪ ಪ್ರಗತಿ ಕಂಡಿದೆ ಎಂದು ನಿವಾಸಿಗಳು ಹೇಳಿದರು.

ರಸ್ತೆ ಸರಿಪಡಿಸಲು ಪಾಲಿಕೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಎಚ್‌ವಿ ರಸ್ತೆಯ 15,000 ಕ್ಕೂ ಹೆಚ್ಚು ನಿವಾಸಿಗಳು ಒತ್ತಾಯಿಸಿದ್ದಾರೆ. ಶೀಘ್ರವಾಗಿ ರಸ್ತೆ ಸರಿಪಡಿಸಬೇಕು, ಗುತ್ತಿಗೆದಾರರಿಗೆ ಹೊಣೆ ಹೊರಿಸಬೇಕು ಹಾಗೂ ಸ್ಥಳೀಯವಾಗಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್