ಸಾಂದರ್ಭಿಕ ಚಿತ್ರ  
ರಾಜ್ಯ

2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ತೀವ್ರ ಕಣ್ಗಾವಲು

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಾಯಿಸಿದ್ದಾರೆ.

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದು ಮಾರ್ಚ್ 1ರಿಂದ ಮಾರ್ಚ್ 20ವರೆಗೆ ರಾಜ್ಯಾದ್ಯಂತ ನಡೆಯಲಿದೆ. ಈ ಬಾರಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,050 ಪದವಿ ಪೂರ್ವ ಕಾಲೇಜುಗಳ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಾಯಿಸಿದ್ದಾರೆ.

ತೀವ್ರ ಭದ್ರತೆ

ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ ಕಾಸ್ಟಿಂಗ್ ಮಾಡಲಾಗುತ್ತದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ. ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟ‌ರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಆಕ್ರಮಗಳಿಗೆ ಉತ್ತೇಜಿಸುವ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯಿದೆಯ ನಿಯಮಗಳಡಿಯಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ಸೇರಿದಂತೆ ಎಲ್ಲಾ ವಿಧದ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಸಮಯ

ಬೆಳಗ್ಗೆ 10 ರಿಂದ 1 ಗಂಟೆವರೆಗೆ ಕನ್ನಡ, ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ನಡೆಸಲು ಬೇಕಾಗಿರುವ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಹೇಳಿದೆ. ಕಳೆದ ಬಾರಿಯಂತೆ ಈ ಬಾರಿಯೂ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ 2,342 ಸ್ಥಾನಿಕ ಜಾಗೃತ ದಳ, 504 ವಿಚಕ್ಷಣ ಜಾಗೃತದಳ, 365 ಪ್ರಶ್ನೆಪತ್ರಿಕೆ ವಿತರಣಾ ಮಾರ್ಗಗಳನ್ನು ಗುರುತಿಸಲಾಗಿದೆ.

1,171 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ/ಜಂಟಿ ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆಗಳ/ಪ್ರಶ್ನೆಪತ್ರಿಕೆಗಳ ಪಾಲಕರನ್ನು ನಿಯೋಜಿಸಲಾಗುತ್ತದೆ. 76 ಕೇಂದ್ರಗಳಲ್ಲಿ 31,000 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಲಿದ್ದಾರೆ.

ಉಚಿತ ಪ್ರಯಾಣ ವ್ಯವಸ್ಥೆ

ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಮರಳಿ ಮನೆಗೆ ಬರಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಗುರುತಿನ ಚೀಟಿ ಮತ್ತು ಪ್ರವೇಶಪತ್ರವನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.

ವೆಬ್ ಕಾಸ್ಟಿಂಗ್

ಉತ್ತರ ಪತ್ರಿಕೆ ಮೌಲ್ಯಮಾಪನಕ್ಕಾಗಿ, 31,000 ಮೌಲ್ಯಮಾಪಕರು 76 ಕೇಂದ್ರಗಳಲ್ಲಿ ಪಿಯುಸಿ ಪತ್ರಿಕೆಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವೆಬ್‌ಕಾಸ್ಟಿಂಗ್ ನ್ನು ಜಾರಿಗೆ ತರಲಾಗುವುದು.

ಭದ್ರತಾ ಕ್ರಮಗಳಲ್ಲಿ ಪಿಯುಸಿಗಾಗಿ 2,342 ಸ್ಥಳೀಯ ಜಾಗೃತ ದಳಗಳು ಸೇರಿವೆ. ಕಟ್ಟುನಿಟ್ಟಿನ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ 504 ವಿಚಕ್ಷಣ ತಂಡಗಳು ಮೇಲ್ವಿಚಾರಣೆ ಮಾಡುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT