ಬೆಂಗಳೂರು: ಬೆಂಗಳೂರು ಚಲನಚಿತ್ರೋತ್ಸವವನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಉದ್ಘಾಟಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ‘ಕನ್ನಡ ಚಿತ್ರರಂಗವನ್ನು ದೊಡ್ಡ ಎತ್ತರಕ್ಕೆ ನೀವು ಕೊಂಡೊಯ್ದಿದ್ದೀರಿ, ಅದರ ಬಗ್ಗೆ ನಮಗೆ ಗೌರವ ಇದೆ. ಆದರೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯೂ ನಿಮ್ಮ ಮೇಲೆ ಇದೆ ಎಂದು ಹೇಳಿದ್ದಾರೆ.
ಈ ವೇಳೆ ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಎಲ್ಲೆಡೆ ಸುದ್ದಿಯಾಗುತ್ತಿದೆ.
"ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯೂ ನಿಮ್ಮ ಮೇಲೆ ಇದೆ ಎಂದು ಹೇಳಿರುವ ಡಿಕೆ ಶಿವಕುಮಾರ್, ‘ನನಗೆ ಚಲನಚಿತ್ರ ವಾಣಿಜ್ಯ ಮಂಡಳಿ, ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ, ಏಕೆಂದರೆ, ಕೋವಿಡ್ ಮುಗಿದ ಸಮಯದಲ್ಲಿ ನಾವು ನಮ್ಮ ಜಲ ನಮ್ಮ ಹಕ್ಕು ಎಂಬ ಜಾಥಾ ಮಾಡಿದ್ದೆವು, ನಮ್ಮ ಜನರಿಗೆ ನೀರು ಕೊಡುವ ಉದ್ದೇಶದಿಂದಾಗಿ ನಾವು, ಸಿದ್ದರಾಮಯ್ಯನವರು ಪಾದಯಾತ್ರೆ ಮಾಡಿದ್ದೆವು.
ಆದರೆ ಆಗ ಯಾವ ನಟರೂ ಸಹ ನಮಗೆ ಬೆಂಬಲ ಕೊಡಲಿಲ್ಲ, ಸಾಧು ಕೋಕಿಲ ಮತ್ತು ದುನಿಯಾ ವಿಜಿ ಬಿಟ್ಟರೆ ಇನ್ಯಾರೂ ಸಹ ನಮಗೆ ಬೆಂಬಲ ಕೊಡಲಿಲ್ಲ’ ಅದಕ್ಕೆ ನಮ್ಮ ಸರ್ಕಾರ ಬಂದ ಕೂಡಲೇ ಸಾಧು ಕೋಕಿಲ ಅವರಿಗೆ ಅಕಾಡೆಮಿ ಅಧ್ಯಕ್ಷ ಸ್ಥಾನ ಕೊಟ್ಟೆವು. ನಮ್ಮ ಕಷ್ಟಕಾಲದಲ್ಲಿ ಜೊತೆಗೆ ನಿಂತವರನ್ನು ಗುರುತಿಸಬೇಕು. ನನ್ನನ್ನು ಕೆಲವು ನಟರೆಲ್ಲ ಬಳಸಿಕೊಳ್ಳುತ್ತಾರೆ. ಆ ಮೇಲೆ ಬಿಸಾಡುತ್ತಾರೆ. ಆದರೆ ಹಾಗೆ ಆಗುವುದಿಲ್ಲ. ನಾನು ಇದನ್ನೆಲ್ಲ ಗಮನಿಸುವುದಿಲ್ಲ ಎಂದು ಯಾರೂ ಸಹ ತಿಳಿದುಕೊಳ್ಳಲು ಹೋಗಬೇಡಿ" ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾವು ಐದು ಗ್ಯಾರೆಂಟಿಗಳನ್ನು ತಂದೆವು. ನಾವೇನು ನಮ್ಮ ಊಟಕ್ಕೆ ತಂದೆವಾ? ಇನ್ನು ಮುಂದೆಯಾದರೂ ಸರಿಯಾಗಿ ನಡೆದುಕೊಳ್ಳಿ, ಕೇವಲ 20 ಜನಕ್ಕೆ ಸಿನಿಮಾ ಎಂಬುದು ಬೇಕಾಗಿರೋದಾ? ಸಿನಿಮಾ ಶೂಟಿಂಗ್ ಗೆ ನಾವು ಅನುಮತಿ ಕೊಡಬೇಡಿ ಎಂದು ಹೇಳಿದರೆ, ಶೂಟಿಂಗ್ ನಡೆಯುವುದೇ ಇಲ್ಲ. ಆಗ ಏನು ಮಾಡ್ತೀರಿ? ಯಾರು ಯಾರಿಗೆ ಎಲ್ಲೆಲ್ಲಿ ನೆಟ್ಟು ಬೋಲ್ಟು ಟೈಟ್ ಮಾಡಬೇಕು ಎಂಬುದು ನನಗೆ ಗೊತ್ತಿದೆ ಇದನ್ನು ಎಚ್ಚರಿಕೆ ಎಂದಾದರೂ ತೆಗೆದುಕೊಳ್ಳಿ, ಮನವಿ ಎಂದಾದರೂ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.