ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ ಕೃತಿಕಾ ಕಾಗೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಕೃತಿಕಾ ಕಾಗೆ ಅಂತ್ಯಕ್ರಿಯೆ ನಡೆಯಲಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು.
ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ಗಂಭೀರವಾಗಿ ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿಯೊಂದನ್ನು ರಚಿಸಲು ಸರ್ಕಾರ ಮುಂದಾಗಿದೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.