ಬೆಂಗಳೂರು ಟ್ರಾಫಿಕ್ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ

ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಪ್ರತಿನಿತ್ಯ ನಾಗರಿಕರು ಪರದಾಡುತ್ತಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ದೂರಾಗಿಸಲು ಸುರಂಗ ಮಾರ್ಗವೊಂದೇ ಪರಿಹಾರ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಇಲಾಖೆ ಸಚಿವ ಹಾಗೂ ಬೆಂಗಳೂರು ಅಭಿವೃದ್ಧಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಪ್ರತಿನಿತ್ಯ ನಾಗರಿಕರು ಪರದಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಸುರಂಗ ಮಾರ್ಗದ ಯೋಜನೆ ಕೆಟ್ಟದ್ದಲ್ಲ, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಇದು ಕಡಿಮೆ ಮಾಡುತ್ತದೆ ಮಾಡುತ್ತದೆ ಎಂದು ಹೇಳಿದರು.

ಜಯದೇವ ಮೇಲ್ಸೇತುವೆ ಕೆಡವಿರುವುದನ್ನು ಟೀಕಿಸಲಾಗಿತ್ತು. ಆದರೆ ಮೆಟ್ರೋ ಮಾರ್ಗದಿಂದ ಲಾಭವಾಗಲಿದೆ. ಈ ಹಿಂದೆ ಡಬಲ್ ಡೆಕ್ಕರ್ ಮೇಲ್ಸೇತುವೆ ಕಲ್ಪನೆಯನ್ನು ವಿರೋಧಿಸಿದ ಜನರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರಯೋಜನ ಪಡೆಯುತ್ತಿದ್ದಾರೆ. ಶಿವಾನಂದ ವೃತ್ತದಲ್ಲಿನ ಉಕ್ಕಿನ ಮೇಲ್ಸೇತುವೆಯಿಂದ ಜನರಿಗೆ ಮತ್ತು ತಜ್ಞರಿಗೆ ಯಾವುದೇ ಸಮಸ್ಯೆಗಳಾಗಿರಲಿಲ್ಲ. ಆದರೆ, ಹೆಬ್ಬಾಳದವರೆಗೆ ಮುಂದುವರೆಸುವ ಕುರಿತು ಟೀಕಿಸಿದ್ದರು ಎಂದು ತಿಳಿಸಿದರು.

ಇದೇ ವೇಳೆ ಶಿವಾನಂದ ಮೇಲ್ಸೇತುವೆ ಮತ್ತು ನೆಹರು ವೃತ್ತದಲ್ಲಿ ಟ್ರಾಫಿಕ್ ಜಾಮ್ ಕುರಿತು ಮಾಧ್ಯಮಗಳು ಮತ್ತು ಪ್ರಯಾಣಿಕರ ಟೀಕೆಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಹೆಚ್ಚು ಸಂಚಾರ ದಟ್ಟಣೆ ಇರುವ ಕಡೆಗೆ ಹೋಗುವ ಜನರು, ಅಲ್ಲಿ ಕೈಗೊಳ್ಳಲಾಗಿರುವ ಪರಿಹಾರ ಮಾರ್ಗಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗ ನಿರ್ಮಾಣವೊಂದೇ ಪರಿಹಾರವಾಗಿದೆ ಎಂದು ಹೇಳಿದರು.

ಆದರೆ, ಸರ್ಕಾರದ ಈ ಪರಿಹಾರಕ್ಕೆ ಹಲವು ಸರ್ಕಾರಿ ಅಧಿಕಾರಿಗಳೇ ಸಹಮತ ವ್ಯಕ್ತಪಡಿಸಿಲ್ಲ. ಸುರಂಗ ಮಾರ್ಗ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದ್ದಾರೆ.

ಜನರು ಮೇಲಿನ ರಸ್ತೆಯ ಬದಲಿಗೆ ಸುರಂಗ ರಸ್ತೆಯಲ್ಲಿ ಸಿಲುಕಿಕೊಳ್ಳುತ್ತಾರಷ್ಟೇ. ಸರ್ಕಾರದ ಸುರಂಗ ಮಾರ್ಗದ ಬದಲಿಗೆ ವಾಣಿಜ್ಯ ಸಂಕೀರ್ಣಗಳು ಮತ್ತು ಕಟ್ಟಡಗಳಲ್ಲಿ 2000- 3000 ಉದ್ಯೋಗಿಗಳು ಹತ್ತಿರದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾಪಿಸಿದ್ದೇವೆ. ಸರಿಯಾದ ಫೀಡರ್ ಬಸ್‌ಗಳನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ನಗರದಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣಗಳು ಬರುತ್ತಿವೆ. ಮೆಟ್ರೋ ಮಾರ್ಗಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

SCROLL FOR NEXT