ಗದಗ/ದಕ್ಷಿಣ ಕನ್ನಡ: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಐವರು ದಾರುಣ ಸಾವನ್ನಪ್ಪಿದ್ದಾರೆ. ಗದಗದ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಮೃತರನ್ನು ನಿಂಗಪ್ಪ ಮಾದರ, ಯಮನಪ್ಪ ಮತ್ತು ಮಂಜುನಾಥಗೌಡ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಜಲ್ಪಡ್ಪು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು. ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.