ವಿಧಾನ ಸೌಧ  
ರಾಜ್ಯ

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಮಾರ್ಚ್ 7ಕ್ಕೆ ಬಜೆಟ್ ಮಂಡನೆ

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬೆಂಗಳೂರು: ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.

ರ್ಯಾಂಪ್ ವ್ಯವಸ್ಥೆ

ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್‌ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ. ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT