ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಭೀತಿ: ಒಂದೇ ಫಾರಂನಲ್ಲಿ 10,000 ಕೋಳಿಗಳ ಸಾವು

ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

ಬಳ್ಳಾರಿ: H5N1 ವೈರಸ್ ಪರಿಣಾಮ ಬಳ್ಳಾರಿ ಜಿಲ್ಲೆಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕುರಿತ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

ಬಳಿಕ ಫೆಬ್ರವರಿ 26 ರಂದು, ಕಪ್ಪಗಲ್ಲು ಕೋಳಿ ಸಾಕಣೆ ಕೇಂದ್ರದಲ್ಲಿ 8,000 ಕೋಳಿಗಳು ಒಮ್ಮೆಲೆ ಸಾವನ್ನಪ್ಪಿವೆ, ಕೋಳಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಬಳ್ಳಾರಿ ಉಪ ಆಯುಕ್ತ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದ್ದಾರೆ.

ಪ್ರಸ್ತುತದ ಪರಿಸ್ಥಿತಿಯಲ್ಲಿ ಕೋಳಿಗಳನ್ನು ನಿರ್ವಹಿಸುವ ಕುರಿತು ಕೋಳಿ ಸಾಕಾಣೆಗಾರರಿಗೆ ತರಬೇತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಆಂಧ್ರಪ್ರದೇಶ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಪಶು ಸಂಗೋಪನಾ ಇಲಾಖೆಯು 10 ತಂಡಗಳನ್ನು ರಚಿಸಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್‌ಪೋಸ್ಟ್‌ಗಳಲ್ಲೂ ಪರಿಶೀಲನೆ ನಡೆದಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಜನರು ಆತಂಕ ಪಡುವ ಪರಿಸ್ಥಿತಿ ಇಲ್ಲ. ಕೋಳಿ ಮಾಂಸ, ಮೊಟ್ಟೆ ಸೇವನೆ ವೇಳೆ ಚೆನ್ನಾಗಿ ಬೇಯಿಸಿ ಸೇವಿಸಬೇಕು. ಮಾಂಸ ಸೇವಿಸುವ ಮೊದಲು ಅರ್ಧ ಗಂಟೆಗಿಂತ ಹೆಚ್ಚು ಕಾಲ ಕನಿಷ್ಠ 70 ಡಿಗ್ರಿ ಸೆಲ್ಸಿಯಸ್‌ನಲ್ಲಿ ಬೇಯಿಸಬೇಕೆಂದು ಸಲಹೆ ನೀಡಿದರು.

ಕಪ್ಪಗಲ್ಲು ಫಾರ್ಮ್ ಸುತ್ತಲಿನ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದೆ, ಜನರು ಭಯ ಪಡುವ ಬದಲು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT