ನಿಶಾಂತ್, ಚಂದನ 
ರಾಜ್ಯ

ಬಂಡೀಪುರ: ರೆಸಾರ್ಟ್ ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ!

ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.

ಮೈಸೂರು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಸೋಮವಾರ ನಡೆದಿದೆ.

ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.

ಬಳಿಕ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಡಿವೈಎಸ್‌ಪಿ ಲಕ್ಷ್ಮಯ್ಯ ನೇತೃತ್ವದ ಪೊಲೀಸ್ ತಂಡ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರೀಶೀಲನೆ ನಡೆಸಿತು.

ಘಟನೆಯ ಕುರಿತು ಮಾತನಾಡಿದ ಎಸ್‌ಪಿ ಬಿ.ಟಿ. ಕವಿತಾ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಘಟನೆಗೆ ಈ ಬಗ್ಗೆ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಪತಿ, ಪತ್ನಿ ಮತ್ತು ಮಗುವನ್ನು ಕರೆದುಕೊಂಡು ಹೋಗಿದ್ದಾರೆಂದು ಹೇಳಿದರು. ಸಂಬಂಧಿಕರು ಅವರನ್ನು ಕರೆದುಕೊಂಡು ಹೋಗಿದ್ದಾರೋ ಅಥವಾ ಬೇರೆ ಯಾರಾದರೂ ಕರೆದುಕೊಂಡು ಹೋಗಿದ್ದಾರೋ ಎಂಬುದು ತಿಳಿದಿಲ್ಲ. ಅವರನ್ನು ಯಾರು ಕರೆದುಕೊಂಡು ಹೋದರು ಎಂಬುದರ ಬಗ್ಗೆ ರೆಸಾರ್ಟ್‌ಗೂ ಯಾವುದೇ ಮಾಹಿತಿ ಇಲ್ಲ. ಅದು ಅಪಹರಣವಾಗಿದ್ದರೆ, ಪ್ರತಿರೋಧ ಎದುರಾಗುತ್ತಿತ್ತು. ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್