ರಾಜ್ಯ

News Headlines 04-03-25 | Congress guarantee ಬಿಟ್ಟುಬಿಡಿ; ಅಕ್ರಮ ಚಿನ್ನ ತಂದ ಆರೋಪ: ಮಾಣಿಕ್ಯ ನಟಿ ರನ್ಯಾ ರಾವ್ ಬಂಧನ; ದಂಪತಿ-ಮಗು ಅಪಹರಣ!

ಫಲಾನುಭವಿಗಳು ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡಿ

ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ. ಅದು ಬಡವರಿಗೆ ತಲುಪಬೇಕೆಂದು ತಿಳಿಸಿದ್ದರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದೇನೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.

ಅಕ್ರಮ ಚಿನ್ನ ತಂದ ಆರೋಪ: ನಟಿ ರನ್ಯಾ ರಾವ್ ಬಂಧನ

ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ರನ್ಯಾ ರಾವ್‌ ದುಬೈನಿಂದ ಬೆಂಗಳೂರಿಗೆ ಹಿಂದಿರುಗಿದ್ದರು. ತಪಾಸಣೆ ವೇಳೆ ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಪತ್ತೆಯಾಗಿದೆ. ಕೂಡಲೇ ನಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ರನ್ಯಾ ರಾವ್‌ ವಿರುದ್ಧ ಬರೋಬ್ಬರಿ 15 ಕೆಜಿಯಷ್ಟು ಚಿನ್ನ ತಂದಿದ್ದಾರೆ ಎಂಬ ಆರೋಪಿಗಳು ಕೇಳಿಬಂದಿವೆ. ಸದ್ಯ ವಿಚಾರಣೆ ನಡೆಯುತ್ತಿದೆ. ರನ್ಯಾ ರಾವ್ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಚಿತ್ರದಲ್ಲಿ ನಟಿಸಿದ್ದರು.

ಬಲ್ದೋಟ ಕಾರ್ಖಾನೆ ಕೆಲಸ ನಿಲ್ಲಿಸಲು ಸಿದ್ದರಾಮಯ್ಯ ಸೂಚನೆ

ಕೊಪ್ಪಳದಲ್ಲಿನ ಬಲ್ದೋಟ ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬಲ್ಡೋಟಾ ಕಾರ್ಖಾನೆ ಆರಂಭವನ್ನು ವಿರೋಧಿಸಿ ಫೆ.24ರಂದು ಕೊಪ್ಪಳ ಬಂದ್‌ ಮಾಡಲಾಗಿತ್ತು. ಗಮಿಮಠದ ಶ್ರೀಗಳು ಜಿಲ್ಲೆಯ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದರು. ಯಾವುದೇ ಕಾರಣಕ್ಕೂ ಸ್ಟೀಲ್ ಪ್ಲ್ಯಾಂಟ್ ವಿಸ್ತರಣೆ ಆಗಬಾರದು, ಅದನ್ನ ತಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರು. ತೀವ್ರ ವಿರೋಧದ ನಡುವೆಯೂ ಪ್ಲಾಂಟ್ ನಿರ್ಮಾಣಕ್ಕೆ ಸಂಸ್ಥೆ ಭೂಮಿ ಪೂಜೆ ನೆರವೇರಿಸಿತ್ತು.

ಖಾಸಗಿ ರೆಸಾರ್ಟ್‌ನಿಂದ ದಂಪತಿ, ಮಗು ಅಪಹರಣ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆ. ಬಳಿಕ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಡಿವೈಎಸ್‌ಪಿ ಲಕ್ಷ್ಮಯ್ಯ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳ ಪರೀಶೀಲನೆ ನಡೆಸಿವೆ.

ವಿಧಾನಸಭೆಯಲ್ಲೂ ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆ ಸದ್ದು!

ವಿಧಾನಸಭೆ ಕಲಾಪದಲ್ಲೂ ನಟ್ಟು ಬೋಲ್ಟ್ ಸದ್ದು ಮಾಡಿದ್ದು, ಪ್ರತಿಪಕ್ಷಗಳ ಸದಸ್ಯರು ಮಾತನಾಡುವಾಗ ನಮ್ಮನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಆರೋಪಿಸಿ ಮಂಗಳವಾರ ಬಿಜೆಪಿ ಕೋಲಾಹಲ ಸೃಷ್ಟಿಸಿತು. ಕಲಾಪ ವರದಿಯ ಸಮಯದಲ್ಲಿ, ವಿರೋಧ ಪಕ್ಷದ ಶಾಸಕರು ಮಾತನಾಡುವಾಗಲೆಲ್ಲಾ ಕ್ಯಾಮೆರಾಗಳು ಸ್ಪೀಕರ್ ಮೇಲೆ ಕೇಂದ್ರೀಕರಿಸುತ್ತಿವೆ. ಆದರೆ ಆಡಳಿತ ಪಕ್ಷದ ಶಾಸಕರು ಅಥವಾ ಸಚಿವರು ಮಾತನಾಡುವಾಗ ಹೀಗೆ ಆಗುವುದಿಲ್ಲ ಎಂದು ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ ಖಾದರ್ ಅವರು, ಯಾರೂ ನಿಮ್ಮನ್ನು ತೋರಿಸಬಾರದು ಎಂದು ಸೂಚಿಸಿಲ್ಲ. ‌ತಾಂತ್ರಿಕ ಸಮಸ್ಯೆ ಇರಬಹುದು. ಅದನ್ನು ಸರಿಪಡಿಸಲಾಗುವುದು ಎಂದರು. ಅಲ್ಲದೆ, ಕಾರ್ಯದರ್ಶಿಯನ್ಮು ಕರೆದು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT