ಬೆಂಗಳೂರು: ಆನೆ ದಾಳಿ ಬಗ್ಗೆ ಮಾಹಿತಿ ನೀಡಿದ್ದರೂ ತಡವಾಗಿ ಪ್ರತಿಕ್ರಿಯೆ ನೀಡಿದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆಯೊಂದು ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿಯ ಹಲಸಿನಮರದೊಡ್ಡಿಯಲ್ಲಿ ಶುಕ್ರವಾರ ನಡೆದಿದೆ.
ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸಿ, ಹಾನಿಗೊಳಿಸಿದ್ದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹಲವು ಗಂಟೆಗಳ ಬಳಿಕ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದಾಗ ಕೆಂಡಾಮಂಡಲಗೊಂಡ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಘಟನೆ ಸಂಬಂಧ ಡಿಆರ್‌ಎಫ್‌ಒಪಿ ಮುತ್ತುಸ್ವಾಮಿ ನಾಯಕ್ ಅವರು ದೂರು ರಾಮನಗರದಲ್ಲಿ ದೂರು ನೀಡಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಡಿಆರ್‌ಎಫ್‌ಒ ತಮ್ಮ ದೂರಿನಲ್ಲಿ ಗ್ರಾಮಸ್ಥರಾದ ಕಿರಣ್, ಕೆ.ಟಿ. ಸುಂದರ್, ಗುರುಪ್ರಸಾದ್, ತಿಮ್ಮೇಶ್ ಮತ್ತು ಪ್ರತಾಪ್ ತಮ್ಮ ಮೇಲೆ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಗದೀಶ್ ಮತ್ತು ಶರಣಬಸವ ಎಂಬ ಇಬ್ಬರು ಪೊಲೀಸರ ಮೇಲೂ ಹಲ್ಲೆ ನಡೆದಿದೆ ಎಂದು ತಿಳಿಸಿದ್ದಾರೆ.
ಜಗದೀಶ್ ಸಾತನೂರು ಪೊಲೀಸ್ ಠಾಣೆಗೆ ಸೇರಿದ್ದರೆ, ಶರಣಬಸವ ಚನ್ನಪಟ್ಟಣ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್)ಗೆ ಸೇರಿದವರಾಗಿದ್ದಾರೆ. ಗುತ್ತಿಗೆ ಆಧಾರದ ಮೇಲೆ ಗಸ್ತು ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮುನೇಶ್, ಶಸ್ಕಿಕುಮಾರ್ ಮತ್ತು ಶಂಕರಮೂರ್ತಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಆನೆ ದಾಳಿ ಬಗ್ಗೆ ಮಾಹಿತಿ ಪಡೆದ ನಂತರ, ಗಸ್ತು ತಂಡವನ್ನು ಸರ್ಕಾರಿ ಜೀಪಿನಲ್ಲಿ ಸ್ಥಳಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆರೋಪಿಗಳು ಕಲ್ಲುಗಳನ್ನು ಇರಿಸಿ ಜೀಪನ್ನು ತಡೆದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೆ ಸಿಬ್ಬಂದಿಗು ಮಾಹಿತಿ ನೀಡಿದ ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಹೆಚ್ಚುವರಿ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಲಾಯಿತು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದರು ಎಂದು ಹೇಳಿದ್ದಾರೆ.
ದೂರು ಹಿನ್ನೆಲೆಯಲ್ಲಿ ಹಲಸಿನಮರದೊಡ್ಡಿ ಮತ್ತು ಕುರುಬಳ್ಳಿದೊಡ್ಡಿ ನಿವಾಸಿಗಳಾದ ಕಿರಣ್, ಕೆ.ಟಿ. ಸುಂದರ್ ಮತ್ತು ಪ್ರತಾಪ್ ಎಂಬುವವರನ್ನು ಬಂಧಿಸಲಾಗಿದ್ದು, ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಗ್ರಾಮಸ್ಥರು ಅರಣ್ಯ ಅಧಿಕಾರಿಗಳು. ಇಬ್ಬರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಗ್ರಾಮಸ್ಥರ ವಿರುದ್ಧ ಕೊಲೆ ಯತ್ನ (ಬಿಎನ್‌ಎಸ್ 109) ಮತ್ತು ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.