ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಟೋರಿಕ್ಷಾ ಚಾಲಕನ ಬಂಧನ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾರ್ಚ್ 4 ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತನನ್ನು ಬಂಧಿಸಿದ್ದರು.
ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಆರೋಪಿಯಿಂದ ಸುಮಾರು 3.75 ಲಕ್ಷ ರೂಪಾಯಿ ಮೌಲ್ಯದ 75 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್ ಮತ್ತು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಅಬ್ದುಲ್ ಜಲೀಲ್ (32) ಎಂಬಾತ ಬೆಂಗಳೂರಿನಿಂದ ಪಾರ್ಸೆಲ್ ಸರ್ವಿಸ್ ಮೂಲಕ ಎಂಡಿಎಂಎ ತರಿಸಿಕೊಂಡು ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾರ್ಚ್ 4 ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತನನ್ನು ಬಂಧಿಸಿದ್ದರು. ಆರೋಪಿಯು ದೊಡ್ಡ ಮಾದಕವಸ್ತು ವಿತರಣಾ ಜಾಲದ ಭಾಗವಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.