ಸಾಂದರ್ಭಿಕ ಚಿತ್ರ 
ರಾಜ್ಯ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ ವೇಳೆ ಬಂದ್

ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅನ್ನು ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಮಾಹಿತಿ ನೀಡಿದ್ದು, ಇಂದು ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ವಾಹನ ಸಂಚಾರ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್​​ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ರಾತ್ರಿ ವೇಳೆ ಫ್ಲೈಓವರ್ ಬಂದ್ ಆಗಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ ಆದರೆ, ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

SCROLL FOR NEXT