ರಿಜ್ವಾನ್ ಅರ್ಷದ್ 
ರಾಜ್ಯ

ಚಿನ್ನ ಕಳ್ಳಸಾಗಣೆ; ನಟಿ ರನ್ಯಾ ರಾವ್ ಬಂಧನ: ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಖಚಿತ- ರಿಜ್ವಾನ್ ಅರ್ಷದ್

ಡಿಆರ್‌ಐ ಅಧಿಕಾರಿಗಳು ಸೋಮವಾರ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ತಪಾಸಣೆಗೆ ಒಳಪಡಿಸಿದಾಗ 14.8 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ಆಕೆಯನ್ನು ಬಂಧಿಸಲಾಗಿತ್ತು.

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಗುರುವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಐಪಿಎಸ್ ಅಧಿಕಾರಿಯ ಮಗಳು ಚಿನ್ನ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂಬುದನ್ನು ತಿಳಿದು ಆಘಾತಕಾರಿಯಾಗಿದೆ. ಕೆಲವರು ಆಕೆ ಅವರ ಮಲಮಗಳು ಎನ್ನುತ್ತಾರೆ. ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತದೆ. ಸತ್ಯಗಳನ್ನು ಬಹಿರಂಗಪಡಿಸಲಾಗುತ್ತದೆ ಮತ್ತು ಭಾಗಿಯಾಗಿರುವ ಎಲ್ಲರನ್ನು ಪತ್ತೆಹಚ್ಚಲಾಗುತ್ತದೆ' ಎಂದು ಹೇಳಿದರು.

'ಸಾಮಾನ್ಯ ವ್ಯಕ್ತಿಯಾಗಲಿ ಅಥವಾ ಪ್ರಭಾವಿ ವ್ಯಕ್ತಿಯಾಗಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಶಿಕ್ಷಿಸಲಾಗುವುದು ಮತ್ತು ಈ ವಿಷಯದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುತ್ತೇವೆ' ಎಂದು ಶಾಸಕ ರಿಜ್ವಾನ್ ಅರ್ಷದ್ ಒತ್ತಿ ಹೇಳಿದರು.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಸೋಮವಾರ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ತಪಾಸಣೆಗೆ ಒಳಪಡಿಸಿದಾಗ 14.8 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ಆಕೆಯನ್ನು ಬಂಧಿಸಲಾಗಿತ್ತು.

ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ವನ್ನು ಪಾಕಿಸ್ತಾನ ಭಾರತಕ್ಕೆ ಬಿಟ್ಟುಕೊಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತದೆ ಎಂಬ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ರಿಜ್ವಾನ್, 'ಜೈಶಂಕರ್ ಅವರು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ವನ್ನು ಮರಳಿ ಪಡೆಯುತ್ತೇವೆ ಎಂದು ಹೇಳಿದರೆ ನನಗೆ ತುಂಬಾ ಸಂತೋಷವಾಗುತ್ತದೆ. ಕೇಂದ್ರ ಸರ್ಕಾರ ಪಿಒಕೆ ಅನ್ನು ಭಾರತದೊಂದಿಗೆ ಸಂಯೋಜಿಸುವಲ್ಲಿ ಯಶಸ್ವಿಯಾದರೆ ಕಾಂಗ್ರೆಸ್ ಪಕ್ಷವು ಅತ್ಯಂತ ಸಂತೋಷಪಡುತ್ತದೆ' ಎಂದು ಹೇಳಿದರು.

'ಅದರೊಂದಿಗೆ, ಜೈಶಂಕರ್ ಅವರು ಲಡಾಖ್‌ನಲ್ಲಿ ಚೀನಾ ವಶಪಡಿಸಿಕೊಂಡ ಭೂಮಿಯನ್ನು ಮರಳಿ ಪಡೆಯುವತ್ತಲೂ ಗಮನಹರಿಸಬೇಕು. ನೀವು ಯಾವುದೇ ಕಳವಳ ವ್ಯಕ್ತಪಡಿಸದೆ ನಮ್ಮ ಭೂಮಿಯನ್ನು ಚೀನಾಕ್ಕೆ ಬಿಡುತ್ತಿದ್ದೀರಿ, ಆದರೆ ನೀವು ಪಿಒಕೆಯನ್ನು ಮರಳಿ ಪಡೆಯುವ ಬಗ್ಗೆ ಮಾತನಾಡುತ್ತಿದ್ದೀರಿ. ದಯವಿಟ್ಟು ಮೊದಲು ಕಳೆದ ಮೂರ್ನಾಲ್ಕು ವರ್ಷಗಳಿಂದ ಚೀನಾ ಆಕ್ರಮಿಸಿಕೊಂಡಿರುವ ಪ್ರದೇಶವನ್ನು ಹಿಂದಕ್ಕೆ ತೆಗೆದುಕೊಳ್ಳಿ. ಅದು ಸಾವಿರಾರು ಚದರ ಕಿಲೋಮೀಟರ್‌ಗಳಷ್ಟು ದೊಡ್ಡದಾಗಿದೆ ಎಂದು ನಾವು ನಂಬುತ್ತೇವೆ. ಚೀನಾ ಭಾರತದ ಗಡಿಯಲ್ಲಿ ಮತ್ತು ಭಾರತದ ಪ್ರದೇಶದೊಳಗೆ ಹಳ್ಳಿಗಳನ್ನು ನಿರ್ಮಿಸುತ್ತಿದೆ' ಎಂದು ಅವರು ಹೇಳಿದರು.

ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಮಾತನಾಡಿದ ಅವರು, 'ಅಕ್ರಮ ವಲಸಿಗರನ್ನು ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ನಾಲ್ಕೈದು ವರ್ಷಗಳಿಗೂ ಹೆಚ್ಚು ಕಾಲ ಇಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನದವರೂ ಸೇರಿದಂತೆ ಅಕ್ರಮ ವಲಸಿಗರನ್ನು ನಮ್ಮ ಸರ್ಕಾರ ಗುರುತಿಸಿದೆ. ಕಾನೂನಿನ ಪ್ರಕಾರ ಅವರನ್ನು ಗಡೀಪಾರು ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ' ಎಂದು ಹೇಳಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, 'ಈ ಎಲ್ಲ ವಲಸಿಗರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಬಂದು ನೆಲೆಸಿದ್ದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ, ನಾವು ಪಾಕಿಸ್ತಾನದಿಂದ ಬಂದ ಅಕ್ರಮ ವಲಸಿಗರನ್ನು ಗುರುತಿಸಿ ಅವರನ್ನು ಗಡೀಪಾರು ಮಾಡಲು ಕ್ರಮಗಳನ್ನು ತೆಗೆದುಕೊಂಡೆವು' ಎಂದು ಹೇಳಿದರು.

ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ವಿಧಾನಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಯತ್ನಾಳ್, ಇದನ್ನು ನಿಯಂತ್ರಿಸದಿದ್ದರೆ ಕರ್ನಾಟಕವು ಪಶ್ಚಿಮ ಬಂಗಾಳದಂತೆ ಆಗಬಹುದು ಎಂದು ಎಚ್ಚರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT