ಸಾಂದರ್ಭಿಕ ಚಿತ್ರ  
ರಾಜ್ಯ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ

ಲೋಕಾಯುಕ್ತ ಮೂಲಗಳ ಪ್ರಕಾರ, ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಹೊತ್ತ ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಮೂಲಗಳ ಪ್ರಕಾರ, ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.

8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಯಾರ್ಯಾರ ಮೇಲೆ ದಾಳಿ

ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಗ್ರೂಪ್ ಎ ಮುಖ್ಯ ಎಂಜಿನಿಯರ್ ಟಿ ಡಿ ನಂಜುಂಡಪ್ಪ; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆದ್ದಾರಿ ಎಂಜಿನಿಯರಿಂಗ್‌ನಲ್ಲಿ ಗುಣಮಟ್ಟ ನಿಯಂತ್ರಣ ಮತ್ತು ಗುಣಮಟ್ಟ ಭರವಸೆಯ ಕಾರ್ಯನಿರ್ವಾಹಕ ಎಂಜಿನಿಯರ್ ಗ್ರೇಡ್ -1 ಎಚ್ ಬಿ ಕಲೇಶಪ್ಪ; ಕೋಲಾರದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ ನಾಗರಾಜ್; ಕಲಬುರಗಿಯಲ್ಲಿ ಯೋಜನಾ ಅನುಷ್ಠಾನ ಘಟಕದ ಜಗನ್ನಾಥ್; ದಾವಣಗೆರೆಯ ಆರೋಗ್ಯ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಘಟಕದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ ಎಸ್ ನಾಗರಾಜು ದಾಳಿಗೊಳಗಾದ ಅಧಿಕಾರಿಗಳಾಗಿದ್ದಾರೆ.

ತುಮಕೂರಿನ ತಾವರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಪಿ. ಜಗದೀಶ್; ಬಾಗಲಕೋಟೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮಾಳಪ್ಪ ಸಾಬಣ್ಣ ದುರ್ಗದ; ಮತ್ತು ವಿಜಯಪುರದ ವಸತಿ ಮಂಡಳಿಯ ಎಫ್‌ಡಿಎ ಶಿವಾನಂದ ಶಿವ ಶಂಕರ್ ಕೆಂಭಾವಿ ಅವರ ಮೇಲೆ ದಾಳಿ ಸಹ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ನಗದು, ಚಿನ್ನಾಭರಣಗಳು, ಐಷಾರಾಮಿ ಮನೆಗಳು, ದುಬಾರಿ ವಾಹನಗಳು, ರಿಯಲ್ ಎಸ್ಟೇಟ್ ಮತ್ತು ವಿವಿಧ ಬಾಂಡ್‌ಗಳಲ್ಲಿ ಅವರ ಹೂಡಿಕೆಗಳಿಗೆ ಸಂಬಂಧಿಸಿದ ಅಪರಾಧ ದಾಖಲೆಗಳನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿಸಿವೆ.

ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ ಎಇಇ ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.

ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್​ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ವಿಜಯಪುರದಲ್ಲಿ ಕರ್ನಾಟಕ ಗೃಹ ಮಂಡಳಿ ಎಫ್‌ಡಿಎ ಶಿವಾನಂದ ಕೆಂಬಾವಿ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ ಮತ್ತು ವಿಜಯಪುರ ಜಿಲ್ಲೆ ತಿಡಗುಂದಿ ಗ್ರಾಮದ ಬಳಿಯಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಡಿ. ಮಲ್ಲೇಶ್ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ್ ಸೇರಿದಂತೆ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.

ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಿಡಬ್ಲ್ಯೂಡಿ ಇಲಾಖೆಯ ಸೆಕ್ರೆಟರಿ ಇನ್ ಚೀಫ್ ಜಗನ್ನಾಥ್ ಹಲಿಂಗೆ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಕಲಬುರಗಿ ನಗರದ ಓಕಳಿ ಕ್ಯಾಂಪ್ ಬಡಾವಣೆಯಲ್ಲಿರುವ ಮನೆ, ಬೆಂಗಳೂರಿನ ಕಚೇರಿ, ಧನ್ನೂರ್ (ಕೆ) ಗ್ರಾಮದಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀಳಗಿ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆಂಟ್ ಮಲ್ಲೇಶ್ ದುರ್ಗದ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಬಾಗಲಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ, ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿಯಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT