ನಟಿ ರನ್ಯಾ ರಾವ್ 
ರಾಜ್ಯ

'ಸ್ಮಗ್ಲರ್' ನಟಿ ರನ್ಯಾ ರಾವ್ ಪ್ರತಿ ದುಬೈ ಟ್ರಿಪ್ ಗೆ 12 ಲಕ್ಷ ರೂ ಪಡೆಯುತ್ತಿದ್ದರು!

ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ.

ಬೆಂಗಳೂರು: ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಪ್ರತಿ ದುಬೈ ಟ್ರಿಪ್‌ಗೆ ಸುಮಾರು 12 ಲಕ್ಷ ರೂಪಾಯಿ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ. ಪ್ರತಿ ಪ್ರವಾಸದಲ್ಲೂ ಅವರು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ.

ಪ್ರಕರಣದ ತನಿಖೆಯ ಸಮಯದಲ್ಲಿ ರನ್ಯಾ ರಾವ್‌ಗೆ ಪ್ರತಿ ಬಾರಿ ಚಿನ್ನ ಕಳ್ಳಸಾಗಣೆ ಮಾಡಲು 12 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ವರದಿಯಾಗಿದೆ.

ದುಬೈನ ಖಾಸಗಿ ಹೋಟೆಲ್ ಶೌಚಾಲಯದಲ್ಲಿ ನಟಿಗೆ ವ್ಯಕ್ತಿಯೊಬ್ಬ ಚಿನ್ನ ನೀಡುತ್ತಿದ್ದರು ಎನ್ನಲಾಗಿದ್ದು, ಪ್ರತಿ ಬಾರಿಯೂ ಚಿನ್ನದ ಗಟ್ಟಿಯನ್ನು ತನ್ನ ಸೊಂಟ ಹಾಗೂ ಹೊಟ್ಟೆ ಭಾಗದಲ್ಲಿ ಇಟ್ಟುಕೊಂಡು ಟೇಪ್ ಸುತ್ತಿಕೊಳ್ಳುತ್ತಿದ್ದಳು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲಮಗಳಾಗಿರುವ ರನ್ಯಾ ರಾವ್ 12 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಮಾರ್ಚ್‌ 3 ರಂದು ಬೆಂಗಳೂರಿನ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಮತ್ತು ನಟಿಯಿಂದ ಈಗಾಗಲೇ 17 ಕೋಟಿ ಬೆಲೆಬಾಳುವ ಆಭರಣ ಹಾಗೂ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!