ಸಂಗ್ರಹ ಚಿತ್ರ 
ರಾಜ್ಯ

Karnataka Budget 2025: ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿದ್ದೇನು?

ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು.

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಪ್ರತಿಭಾನ್ವಿತರಾಗಿರುವ 60 ಮಂದಿ ಕ್ರೀಡಾಪಟುಗಳನ್ನು ಒಲಂಪಿಕ್ ಪದಕ ಯೋಜನೆಯಡಿ ಗುರುತಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು, ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು. ಈ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್‌ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.

ಕ್ರೀಡಾ ಕ್ಷೇತ್ರಕ್ಕೆ ಇತರೆ ಘೋಷಣೆಗಳು ಇಂತಿವೆ...

  • ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.

  • ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು ಆರು ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು.

  • ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

  • ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಭ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವರ್ಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26 ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.

  • ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು.

  • ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

  • ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಡೈವಿಂಗ್ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ವ್ಯವಸ್ಥೆಗಳನ್ನೊಳಗೊಂಡು ಮೇಲ್ದರ್ಜೆಗೇರಿಸಲಾಗುವುದು.

  • ಚಾಮರಾಜನಗರದಲ್ಲಿ ಒಲಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

  • ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.

  • ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ ಭಾಗವಹಿಸಲು (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು

  • ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು.

  • 403. ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು.

  • ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.

  • ಒಲಂಪಿಕ್ಸ್, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್ ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT