ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಅವರು, ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್ ಮಂಡಿಸುತ್ತಿದ್ದೇನೆಂದು ಹೇಳಿದರು.
ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಲು ನಿರ್ಧರಿಸಲಾಗಿದ್ದು, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಳ ಮಾಡಿರುವುದಾಗಿ ತಿಳಿಸಿದ ಸಿಎಂ ಮಾಸಿಕ 1000 ರೂ. ಕೊಡುವುದಾಗಿ ಘೋಷಿಸಿದರು.