ಡಿ.ಕೆ ಶಿವಕುಮಾರ್ 
ರಾಜ್ಯ

ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ. ನೆನ್ನೆ ವಿರೋಧ ಪಕ್ಷಗಳ ಶಾಸಕರು ಕೇವಲ ಫೋಟೋಗಾಗಿ ಮಾತ್ರ ಬಂದಿದ್ದರು. ಏನನ್ನೂ ಕೇಳಲು ಬಂದಿರಲಿಲ್ಲ. ಮುಖ್ಯಮಂತ್ರಿಗಳು ಇಲಾಖೆಗೆ ಏನು ಕೊಡಬೇಕು ಎಂದು ಸಚಿವರ ಬಳಿ ಚರ್ಚೆ ಮಾಡುತ್ತಾರೆ” ಎಂದು ತಿರುಗೇಟು ನೀಡಿದರು.

ಕಳೆದ ಎರಡು ದಿನಗಳಿಂದ ನೀಲಿ ಶಾಲು ಹಾಕಿಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಏನು ಬೇಕಾದರೂ ಮಾಡಲಿ. ಪ್ರತಿದಿನ ಬೇಕಾದರೂ ಪ್ರತಿಭಟನೆ ಮಾಡಲಿ, ಕೂಗಲಿ, ಕಿರುಚಲಿ. ನಾವು ರಾಜ್ಯದ ಜನತೆಗೆ ಏನು ಒಳ್ಳೆಯದು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದರು.

ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ನೈತಿಕತೆಯಿಲ್ಲ

“ಬಿಜೆಪಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!