ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) online desk
ರಾಜ್ಯ

ಬಜೆಟ್ ನಲ್ಲಿ ರಂಜಾನ್ ಗಿಫ್ಟ್: ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಣೆ!

2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆಯೇ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬೆಂಗಳೂರು: 2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆಯೇ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬಜೆಟ್ ಭಾಷಣ ಮಾಡಿರುವ ಸಿಎಂ, ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ ಘೋಷಿಸಿದ್ದಾರೆ. ಬಜೆಟ್ ಗೂ ಮುನ್ನವೇ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವ ಸುಳಿವು ಸಿಕ್ಕಿತ್ತು.

ಅಲ್ಪಸಂಖ್ಯಾತರಿಗೆ ಸರ್ಕಾರಿ ಒಪ್ಪಂದಗಳಲ್ಲಿ ಶೇಕಡಾ ನಾಲ್ಕು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಎದುರು ಇರಿಸಿದ್ದ ಸರ್ಕಾರದ ನಡೆಯನ್ನು ವಿರೋಧಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೇಶದಲ್ಲಿ ಅನೇಕ ಇತರ ಸಮುದಾಯಗಳಿರುವಾಗ ಅಲ್ಪಸಂಖ್ಯಾತರೆಂದರೆ ಯಾವಾಗಲೂ ಮುಸ್ಲಿಮರು ಎಂದು ಏಕೆ ಕರೆಯಲಾಗುತ್ತದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದರು.

"ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವೇ ಹೊರತು ಬೇರೆ ಯಾರನ್ನೂ ಅಲ್ಲವೇ? ಕಾಂಗ್ರೆಸ್‌ನ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಗಳು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತವೆ" ಎಂದು ವಿಜಯೇಂದ್ರ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ