ನಮ್ಮ ಮೆಟ್ರೋ PTI
ರಾಜ್ಯ

ಮಾರ್ಚ್ 9ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಈ ಮಾರ್ಗಗಳಲ್ಲಿ 3 ಗಂಟೆ ಕಾಲ ಸೇವೆ ಸ್ಥಗಿತ

ಮಾರ್ಚ್ 9ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10ರವರೆಗೆ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಮೂರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಿಸಿದೆ.

ಬೆಂಗಳೂರು: ಮಾರ್ಚ್ 9ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10ರವರೆಗೆ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಮೂರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಿಸಿದೆ.

ಚಲ್ಲಘಟ್ಟ ಮತ್ತು ವೈಟ್‌ಫೀಲ್ಡ್ ನಡುವಿನ ಪರ್ಪಲ್ ಲೈನ್‌ನಲ್ಲಿ ಹಳಿ ನಿರ್ವಹಣೆಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು BMRCL ತಿಳಿಸಿದೆ. ಕಬ್ಬನ್ ಪಾರ್ಕ್, ಡಾ. ಬಿಆರ್ ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ಪರ್ಪಲ್ ಲೈನ್) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಮೂರು ಗಂಟೆಗಳ ಕಾಲ ನಿಲ್ದಾಣಗಳು ಮುಚ್ಚಲ್ಪಡುತ್ತವೆ ಎಂದು ಬಿಎಂಆರ್‌ಸಿಎಲ್ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಪರ್ಪಲ್ ಲೈನ್‌ನಿಂದ ಗ್ರೀನ್ ಲೈನ್‌ಗೆ ಪ್ರಯಾಣಿಸಲು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10 ರವರೆಗೆ ಕ್ಯೂಆರ್ ಟಿಕೆಟ್‌ಗಳು ಮತ್ತು ಟೋಕನ್‌ಗಳನ್ನು ಖರೀದಿಸದಂತೆ ಪ್ರಯಾಣಿಕರಿಗೆ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ