ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ  
ರಾಜ್ಯ

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್

ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಬಜೆಟ್ ಮಂಡಿಸಿದ್ದು, ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾದ ಯಾವುದೇ ಪ್ರಸ್ತುತ ನಡೆಯುತ್ತಿರುವ ಅಥವಾ ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡಿಲ್ಲ. ಹೀಗಾಗಿ ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆಯಾಗಿದೆ.

ನರಸಿಂಹರಾಜ ವೃತ್ತ ಮತ್ತು ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ನಡುವಿನ ಸ್ಥಗಿತಗೊಂಡ ಫ್ಲೈ ಓವರ್, ಜಿಲ್ಲೆಯ ಜ್ವಲಂತ ಸಮಸ್ಯೆಯನ್ನು ಪರಿಹರಿಸಲು ಅತ್ಯಗತ್ಯ ಯೋಜನೆಯಾಗಿದೆ. ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆಯ[ಕೆಶಿಪ್] ನಡೆಯುತ್ತಿರುವ ಕಾಮಗಾರಿಗಳನ್ನು ವೇಗಗೊಳಿಸಲು ಮಾತ್ರ ಸಿಎಂ ಕ್ರಮಗಳನ್ನು ಪ್ರಸ್ತಾಪಿಸಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 15 ಲಕ್ಷದಿಂದ 20 ಲಕ್ಷಕ್ಕೆ ಏರಿಸುವ ಮೂಲಕ ಸಿಎಂ ಆನೆಗಳ ಕಾಟದಿಂದ ಹತಾಶರಾದ ಜನರ ಮನವೊಲಿಸಲು ಯತ್ನಿಸಿದ್ದಾರೆ.

ಆನೆ ಕಾರ್ಯಪಡೆ ಸಮಿತಿಗೆ 17 ಕೋಟಿ ರೂ. ಮತ್ತು ಹಾಸನ, ಮಡಿಕೇರಿ ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು 60 ಕೋಟಿ ರೂ. ಐತಿಹಾಸಿಕ ಮತ್ತು ವಿಶ್ವಪ್ರಸಿದ್ಧ ಪ್ರವಾಸಿ ತಾಣಗಳಾದ ಹಾಸನ ಜಿಲ್ಲೆಯ ಬೇಲೂರು, ಹಳೇಬೀಡುಗಳಿಗೆ ಮೂಲಸೌಕರ್ಯಗಳನ್ನು ಸುಧಾರಿಸಲು ಸಿಎಂ ಅನುದಾನ ಮೀಸಲಿಟ್ಟಿಲ್ಲ. ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತವನ್ನು ತಪ್ಪಿಸಲು ತಡೆ ಗೋಡೆ ನಿರ್ಮಿಸಲು ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ ಬಜೆಟ್ ನಲ್ಲಿ ಯಾವುದೇ ಅನುದಾನ ನೀಡಿಲ್ಲ.

ಆದಾಗ್ಯೂ, ಕಾಂಗ್ರೆಸ್ ನಾಯಕರು ಬಜೆಟ್ ಅನ್ನು ಸ್ವಾಗತಿಸಿದ್ದಾರೆ, ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಜೆಟ್ ಅನ್ನು ಅತ್ಯಂತ ಕಳಪೆ ಮತ್ತು ಕೆಟ್ಟ ಬಜೆಟ್ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕೆಎಚ್‌ಬಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಅಹೇಳಿದ್ದಾರೆ.

ಇನ್ನು ಬಜೆಟ್ ಅನ್ನು ಸ್ವಾಗತಿಸಿದ ಹಾಸನ ಸಂಸದ ಶ್ರೇಯಸ್ ಪಟೇಲ್, ಸಿಎಂ ಸಾಮಾನ್ಯ ಜನರು, ಕೃಷಿ, ಕಾರ್ಮಿಕರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಯೋಜನೆಗಳು ಮತ್ತು ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT