ಪೊಲೀಸ್ ಓಟದ ಟಿ ಶರ್ಟ್  
ರಾಜ್ಯ

ಬೆಂಗಳೂರು: ಮಾರ್ಚ್ 9 ರಂದು ಪೊಲೀಸ್ ಓಟ; 10,000 ಮಂದಿ ಪಾಲ್ಗೊಳ್ಳುವ ನಿರೀಕ್ಷೆ!

ನಮ್ಮ ಪೊಲೀಸ್ ನಮ್ಮ ಹೆಮ್ಮೆ ಘೋಷವಾಕ್ಯದಡಿ ನಡೆಯಲಾಗುತ್ತಿರುವ ಓಟದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ, ಸೈಬರ್ ಅಪರಾಧ, ಹಸಿರು ಬೆಂಗಳೂರು ಕುರಿತು ಅರಿವು ಮೂಡಿಸಲಾಗುತ್ತಿದೆ. ಅಂದು ಬೆಳಗ್ಗೆ 6-30ಕ್ಕೆ 10 ಕಿ. ಮೀ ಓಟ ಹಾಗೂ 7-30 ಕ್ಕೆ 5 ಕಿ. ಮೀ ಓಟ ಆರಂಭವಾಗಲಿದೆ.

ಬೆಂಗಳೂರು: ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ಮಾರ್ಚ್ 9ರಂದು ಆಯೋಜಿಸಲಾಗಿರುವ ಪೊಲೀಸ್ ಓಟ(KSP RUN)ದಲ್ಲಿ ಪೊಲೀಸ್ ಸಿಬ್ಬಂದಿ, ಸೈನಿಕರು, ಕ್ರೀಡಾಪಟುಗಳು ಸೇರಿದಂತೆ 10,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ನಮ್ಮ ಪೊಲೀಸ್ ನಮ್ಮ ಹೆಮ್ಮೆ ಘೋಷವಾಕ್ಯದಡಿ ನಡೆಯಲಾಗುತ್ತಿರುವ ಓಟದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ, ಸೈಬರ್ ಅಪರಾಧ, ಹಸಿರು ಬೆಂಗಳೂರು ಕುರಿತು ಅರಿವು ಮೂಡಿಸಲಾಗುತ್ತಿದೆ. ಅಂದು ಬೆಳಗ್ಗೆ 6-30ಕ್ಕೆ 10 ಕಿ. ಮೀ ಓಟ ಹಾಗೂ 7-30 ಕ್ಕೆ 5 ಕಿ. ಮೀ ಓಟ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಎರಡೂ ಓಟಗಳು ವಿಧಾನಸೌಧದಿಂದ ಆರಂಭವಾಗಿ, ಕಬ್ಬನ್ ಪಾರ್ಕ್ ನಲ್ಲಿ ಸಂಚರಿಸಲಿವೆ. ರಾಜ್ಯದ ಜಿಲ್ಲಾ ಕೇಂದ್ರಗಳಿಗೂ ಓಟ ನಡೆಯಲಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಶುಕ್ರವಾರ ತಿಳಿಸಲಾಗಿದೆ.

ಓಟದ ಆರಂಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಬ್ಯಾಂಡ್ ಪ್ರದರ್ಶನ ನೀಡಲಿದೆ. ಪದಾತಿ ದಳದ ಕುದುರೆಗಳು ಸಹ ಮಾರ್ಗದಲ್ಲಿ ಸಾಗಲಿವೆ. ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಓಟಕ್ಕೆ ಚಾಲನೆ ನೀಡಲಿದ್ದಾರೆ. ಎಸ್‌ಬಿಐ-ಬೆಂಗಳೂರು ಯೂನಿಟ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ, ಡಿಜಿಪಿ ಅಲೋಕ್ ಮೋಹನ್ ಅವರು ಉಪಸ್ಥಿತರಿರುವರು.

ಓಟದಲ್ಲಿ ಪಾಲ್ಗೊಳ್ಳುವವರು ಮಾರ್ಚ್ 7 ಮತ್ತು ಮಾರ್ಚ್ 8 ರಂದು ಗರುಡಾ ಮಾಲ್ ಎದುರು ಇರುವ ಸುಲ್ಲಿವಾನ್ ಹಾಕಿ ಮೈದಾನದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಟಿ- ಶರ್ಟ್ ಸಂಗ್ರಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT