ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರo ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್ನ ಒಟ್ಟು ಗಾತ್ರ 4,09,549 ಕೋಟಿ ರೂ. ಎಂದು ತಿಳಿಸಿದರು.
ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ ಎಂದು ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ.