ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ 
ರಾಜ್ಯ

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ಎಲ್ಲಾ ವರ್ಗದ ಜನರು ಸಂತೋಷಪಡುವಂತಹ ಉಡುಗೊರೆ: ಡಿ.ಕೆ ಶಿವಕುಮಾರ್

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ” ಎಂದು ತಿಳಿಸಿದರು.

1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು. ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು. ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್