ಸಿಎಂ ಸಿದ್ದರಾಮಯ್ಯ 
ರಾಜ್ಯ

ಕರ್ನಾಟಕ ಬಜೆಟ್ 2025: ಸಿದ್ದರಾಮಯ್ಯ ಆಯವ್ಯಯದಲ್ಲಿ ತವರಿಗೆ ಭರಪೂರ ಉಡುಗೊರೆ; ಮೈಸೂರು ಜನರ ಮೊಗದಲ್ಲಿ ಮಂದಹಾಸ

ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ.

ಮೈಸೂರು: ಹದಿನಾರನೇ ಬಜೆಟ್ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತವರಾದ ಮೈಸೂರು ಜಿಲ್ಲೆಗೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ.

ಕೈಗಾರಿಕೆಗಳಿಂದ ಮೂಲಸೌಕರ್ಯದವರೆಗೆ, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯಿಂದ ಶಿಕ್ಷಣದವರೆಗೆ, ಕೃಷಿಯಿಂದ ಕೆರೆ ತುಂಬಿಸುವವರೆಗೆ, ಕ್ರೀಡಾ ಮೂಲಸೌಕರ್ಯದಿಂದ ಪ್ರವಾಸೋದ್ಯಮ ಮತ್ತು ಸಿನಿಮಾದವರೆಗೆ, ಬಜೆಟ್ ಎಲ್ಲಾ ಅಭಿವೃದ್ಧಿಯ ಮೂಲಗಳನ್ನು ತಲುಪಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ದೀರ್ಘಕಾಲಿಕ ಬರಪೀಡಿತ ಪ್ರದೇಶಗಳಿಗೆ 70 ಕೋಟಿ ರೂ ವೆಚ್ವದಲ್ಲಿ ಎಚ್.ಎನ್.ವ್ಯಾಲಿ 2 ನೇ ಹಂತದ ಯೋಜನೆಯಡಿ 24 ಕೆರೆಗಳಿಗೆ ನೀರು ಹರಿಸುವುದು. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

ಮಧುಗಿರಿಯಲ್ಲಿ 45 ಕೆರೆಗಳು ಮತ್ತು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕುಗಳ 62 ಕೆರೆಗಳನ್ನು 553 ಕೋಟಿ ರೂ. ವೆಚ್ಚದಲ್ಲಿ ತುಂಬಿಸಲು ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯ ಒದಗಿಸಲು 25 ಕೋಟಿ ರೂ. ಮತ್ತು ಎಪಿಎಂಸಿ ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು.

ಕೋಲಾರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಮಹಿಳೆಯರಿಗೆ ಸುರಕ್ಷಿತ ಮತ್ತು ಉತ್ತಮ ಕೆಲಸದ ವಾತಾವರಣವನ್ನು ಒದಗಿಸುವ ಬಗ್ಗೆ ಆಸಕ್ತಿ ಹೊಂದಿರುವ ಮುಖ್ಯಮಂತ್ರಿಗಳು, ಕೋಲಾರ ಜಿಲ್ಲೆಯ ನರಸಾಪುರ ಮತ್ತು ತುಮಕೂರು ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 6,000 ಸಾಮರ್ಥ್ಯದ ಕೆಲಸ ಮಾಡುವ ಮಹಿಳಾ ವಸತಿ ನಿಲಯಗಳನ್ನು ನಿರ್ಮಿಸಲು ಪ್ರಸ್ತಾಪಿಸಿದ್ದಾರೆ.

ಏತನ್ಮಧ್ಯೆ, ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಮತ್ತು ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳಲು ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಮುಖ್ಯಮಂತ್ರಿಗಳು 319 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ.

ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಗಿದೆ. ವರುಣ ಕ್ಷೇತ್ರದ ವ್ಯಾಪ್ತಿಯಲ್ಲೇ ಬರುವ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಜಾಗ ಗುರುತಿಸಲಾಗಿದೆ. ಚಿತ್ರನಗರಿ ಸ್ಥಾಪನೆ ಬಗ್ಗೆ ಹಿಂದಿನಿಂದಲೂ ಹೇಳುತ್ತಲೇ ಬರಲಾಗಿದೆ.

ಮೈಸೂರು ಹುಡುಗಿ ಚೈತ್ರಾ ಖೋ ಖೋ ವಿಶ್ವಕಪ್ ಚಾಂಪಿಯನ್ಸ್ ತಂಡದ ಭಾಗವಾಗಿರುವುದಕ್ಕೆ ಸಂತೋಷಗೊಂಡ ಸಿದ್ದರಾಮಯ್ಯ, ಟಿ ನರಸೀಪುರ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ ಮತ್ತು ಒಲಿಂಪಿಕ್ ಗುಣಮಟ್ಟದ ಈಜುಕೊಳ ನಿರ್ಮಾಣಕ್ಕೆ 6 ಕೋಟಿ ರೂ.ಗಳನ್ನು ಘೋಷಿಸಿದರು.

ಚಿಂತಾಮಣಿ ತಾಲ್ಲೂಕಿಗೆ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆಯಾಗಲಿದೆ. ಹಾಸನ ನಗರ ಪುರಸಭೆಯನ್ನು ನಗರ ನಿಗಮವಾಗಿ ಮೇಲ್ದರ್ಜೆಗೇರಿಸುವುದಾಗಿ ಮತ್ತು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭೂಕುಸಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT