ಡಿಕೆ ಶಿವಕುಮಾರ್-ಮಲ್ಲಿಕಾರ್ಜುನ ಖರ್ಗೆ-ಸಿದ್ದರಾಮಯ್ಯ TNIE
ರಾಜ್ಯ

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ವಿರುದ್ಧ ದಿಕ್ಕಿನಲ್ಲಿ ಹೋದರೆ ಹೈಕಮಾಂಡ್‌ಗೆ ಪೀಕಲಾಟ: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ವಿವಿಧ ಗುಂಪುಗಳ ಲಾಬಿ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿರುದ್ಧ ದಿಕ್ಕಿನಲ್ಲಿ ಹೋಗದಂತೆ ಸಲಹೆ ನೀಡಿದ್ದಾರೆ.

ಕಲಬುರಗಿ: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ವಿವಿಧ ಗುಂಪುಗಳ ಲಾಬಿ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿರುದ್ಧ ದಿಕ್ಕಿನಲ್ಲಿ ಹೋಗದೆ ನೇರ ದಾರಿಯಲ್ಲಿ ಒಟ್ಟಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಜೇವರ್ಗಿಯ ಕಟ್ಟಿ ಸಾಂಗವಿ ಗ್ರಾಮದಲ್ಲಿನ ಧರ್ಮ ಸಿಂಗ್ ಆಸ್ಪತ್ರೆಯ ಆವರಣದಲ್ಲಿ ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳನ್ನು ಹಾಕುವ ಗುರಿಯನ್ನು ಹೊಂದಿರುವ 'ಕಲ್ಯಾಣ ಪಥ ಯೋಜನೆ'ಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಖರ್ಗೆ, ಜನರು ತಮ್ಮ ನಾಯಕರನ್ನು ಒಳ್ಳೆಯ ಆಕಾಂಕ್ಷೆಗಳೊಂದಿಗೆ ಆಯ್ಕೆ ಮಾಡುತ್ತಾರೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ನಾಯಕರ ಕರ್ತವ್ಯ. ನಾಯಕರೇ ವಿರುದ್ಧ ದಿಕ್ಕಿನಲ್ಲಿ ಹೋದರೆ, ಜನರನ್ನು ಹೇಗೆ ಎದುರಿಸಬಹುದು ಎಂದು ಅವರು ಪ್ರಶ್ನಿಸಿದರು. ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು. ಆದರೆ ಕಾರಣಾಂತರಗಳಿಂದ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಹಣಕಾಸು ಸಚಿವರಾಗಿ 16 ಬಾರಿ ಬಜೆಟ್ ಮಂಡಿಸಿದ್ದು ಬಹುಶಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗಳಿಗೆ ಮೆಚ್ಚುಗೆಯ ಅಗತ್ಯವಿದೆ. ಅವರು ದಲಿತರು, ದೀನದಲಿತರು ಮತ್ತು ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಾರೆ. ಅದೇ ರೀತಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ಸಮರ್ಥ ಮತ್ತು ಬದ್ಧ ನಾಯಕರು ಎಂದು ಖರ್ಗೆ ಶ್ಲಾಘಿಸಿದರು.

ಈ ವರ್ಷ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ 5000 ಕೋಟಿ ರೂ.ಗಳನ್ನು ನೀಡುತ್ತಿದೆ ಎಂಬ ಡಿ.ಕೆ. ಶಿವಕುಮಾರ್ ಅವರ ಭಾಷಣವನ್ನು ಉಲ್ಲೇಖಿಸಿದ ಖರ್ಗೆ, ಈ ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ದಶಕಗಳಿಂದ ಹಿಂದುಳಿದಿತ್ತು. ಇದು ಬಲವಾಗಿ ಬೆಳೆಯಲು ಬೆಂಬಲದ ಅಗತ್ಯವಿದೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕದ ಜನರಿಗೆ ಮತ್ತು ವಿಶೇಷವಾಗಿ ಕಲಬುರಗಿಯ ಜನರಿಗೆ ಖರ್ಗೆ ಧನ್ಯವಾದಗಳನ್ನು ಅರ್ಪಿಸಿದರು. ನಿಮ್ಮ ನಿರಂತರ ಬೆಂಬಲದಿಂದಾಗಿ ತಾವು ಎಐಸಿಸಿ ಅಧ್ಯಕ್ಷರಾಗಿರುವುದಾಗಿ ಎಂದು ಹೇಳಿದರು. ಅದೇ ಸಮಯದಲ್ಲಿ 2019ರ ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಅಸಮಾಧಾನ ಇದೆ ಎಂದು ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕವು ವಿಧಾನಸಭೆಗೆ ಅನೇಕ ಕಾಂಗ್ರೆಸ್ ಶಾಸಕರನ್ನು ಮತ್ತು ಲೋಕಸಭೆಗೆ ಸಂಸದರನ್ನು ಕಳುಹಿಸಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು. ಮೈಸೂರಿನಿಂದ ಪ್ರಾರಂಭವಾಗುವ ಯಾವುದೇ ಯೋಜನೆಗಳು ಬೆಂಗಳೂರಿನಲ್ಲಿ ನಿಲ್ಲುತ್ತವೆ. ಆದರೆ ಯಾವುದೇ ಯೋಜನೆಗಳು ಕಲ್ಯಾಣ ಕರ್ನಾಟಕದಿಂದ ಪ್ರಾರಂಭವಾದರೆ, ಅವು ಇಡೀ ಕರ್ನಾಟಕವನ್ನು ತಲುಪುತ್ತವೆ ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT