ತುಂಗಭದ್ರಾ ನದಿ 
ರಾಜ್ಯ

ಗದಗ: ಈಜು ಬಾರದೆ ತುಂಗಭದ್ರಾ ನದಿಗೆ ಇಳಿದ ಸ್ನೇಹಿತರನ್ನು ಉಳಿಸಲು ಹೋಗಿ ಜನ್ಮದಿನದಂದೇ ಮಸಣ ಸೇರಿದ ಯುವಕ, ಮೂವರು ಸಾವು!

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಶಿರಹಟ್ಟಿಯ 34 ವರ್ಷದ ಶರಣಪ್ಪ ಬಡಿಗೇರ, 36 ವರ್ಷದ ಮಹೇಶ್ ಮತ್ತು 38 ವರ್ಷದ ಗುರುನಾಥ್ ಎಂದು ಗುರುತಿಸಲಾಗಿದೆ. ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ಹೋಗಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ್ ನದಿಗೆ ಇಳಿದಿದ್ದನು. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶನ್ ನನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ನದಿಯಲ್ಲಿ ಮುಳುಗಿರುವವರಿಗಾಗಿ ಶೋಧ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT