ತುಂಗಭದ್ರಾ ಎಡದಂಡೆ ನಾಲೆಗೆ ಬಿದ್ದಿದ್ದ ಯುವಕನ ಶವ ಪತ್ತೆ 
ರಾಜ್ಯ

ಕೊಪ್ಪಳ: ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನಕ್ಕೆ 6 ತಂಡ ರಚನೆ

ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು.

ಕೊಪ್ಪಳ: ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿರುವ ವೇಳೆಯಲ್ಲಿ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ., ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು.

ಪುರುಷ ಪ್ರವಾಸಿಗರಲ್ಲಿ ಒಬ್ಬರು ಅಮೆರಿಕದವನಾಗಿದ್ದು. ಇತರರಲ್ಲಿ ಒಬ್ಬ ಒಡಿಶಾ ಮತ್ತು ಮಹಾರಾಷ್ಟ್ರದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ನಾವೆಲ್ಲರೂ ಸಂಗೀತ ಕೇಳುತ್ತಾ ಆನಂದಿಸುತ್ತಿದ್ದಾಗ, ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಪುರುಷರು ಪೆಟ್ರೋಲ್ ಎಲ್ಲಿ ಸಿಗುತ್ತದೆ ಎಂದು ಕೇಳಿದರು, ಹತ್ತಿರದಲ್ಲಿ ಪೆಟ್ರೋಲ್ ಪಂಪ್‌ಗಳಿಲ್ಲ ಎಂದು ನಾನು ತಿಳಿಸಿದಾಗ, ಆರೋಪಿಗಳು 100 ರೂ.ಗಳಿಗೆ ಬೇಡಿಕೆ ಇಟ್ಟರು ಎಂದು ಹೋಂಸ್ಟೇ ನಿರ್ವಾಹಕಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಕೆ ಮತ್ತು ಪ್ರವಾಸಿಗರು ಹಣ ನೀಡಲು ನಿರಾಕರಿಸಿದಾಗ, ಕನ್ನಡ ಮತ್ತು ತೆಲುಗು ಮಾತನಾಡುತ್ತಿದ್ದ ಆರೋಪಿಗಳು ಅವರನ್ನು ನಿಂದಿಸಲು ಪ್ರಾರಂಭಿಸಿದರು. ನಂತರ ಅವರು ಆಕೆಯ ಮತ್ತು ಇಸ್ರೇಲಿ ಪ್ರವಾಸಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಪ್ರವಾಸಿಗರಲ್ಲಿ ಇಬ್ಬರು ಗಾಯಗೊಂಡಿದ್ದಾರೆ, ಒಡಿಶಾದ ಒಬ್ಬ ವ್ಯಕ್ತಿಯ ದೇಹ ಪತ್ತೆಯಾಗಿದೆ ಎಂದು ಅವರು ಹೇಳಿದರು.

ದೂರಿನ ಆಧಾರದ ಮೇಲೆ, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಸುಲಿಗೆ, ದರೋಡೆ ,ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯತ್ನಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಮಹಿಳೆಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಶಂಕಿತರನ್ನು ಗುರುತಿಸಿದ್ದೇವೆ. ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್