ಶಾಸಕ ರವಿ ಗಣಿಗ, ರಶ್ಮಿಕಾ ಮಂದಣ್ಣ 
ರಾಜ್ಯ

ಸಮುದಾಯದ ಕಾರಣದಿಂದ ಟಾರ್ಗೆಟ್: ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ; ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ

ಅಮಿತ್ ಶಾ ಹಾಗೂ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕೊಡುವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್‌.ಯು. ನಾಚಪ್ಪ, ರಶ್ಮಿಕಾ ಅವರನ್ನು "ಶಾಸಕರೊಬ್ಬರು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಕೊಡವರು "ಗೂಂಡಾಗಿರಿ" ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ಬಹುಭಾಷಾ ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಮತ್ತು ಕನ್ನಡ ಹೋರಾಟಗಾರ ಟಿಎ ನಾರಾಯಣ ಗೌಡ ಟೀಕಿಸಿದ ಬೆನ್ನಲ್ಲೇ ನಟಿಗೆ ಸೂಕ್ತ ರಕ್ಷಣೆ ನೀಡುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಒತ್ತಾಯಿಸಿದೆ.

ಈ ಸಂಬಂಧ ಅಮಿತ್ ಶಾ ಹಾಗೂ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕೊಡುವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್‌.ಯು. ನಾಚಪ್ಪ, ರಶ್ಮಿಕಾ ಅವರನ್ನು "ಶಾಸಕರೊಬ್ಬರು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಕೊಡವರು "ಗೂಂಡಾಗಿರಿ" ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ಕೊಡವ ಲ್ಯಾಂಡ್‌ನ ಸ್ಥಳೀಯ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಅಮಿತಾಬ್ ಬಚ್ಚನ್ ಮತ್ತು ಸಲ್ಮಾನ್ ಖಾನ್ ಅವರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ರಶ್ಮಿಕಾ ಅವರು ಸ್ವಂತ ಆಯ್ಕೆ ಮಾಡುವ ಸ್ವಾತಂತ್ರ್ಯ ಹೊಂದಿದ್ದು, ಅದನ್ನು ಗೌರವಿಸಬೇಕು ಎಂದಿದ್ದಾರೆ.

ಯಾರದ್ದೋ ಸೂಚನೆಯಂತೆ ನಡೆದುಕೊಳ್ಳಬೇಕೆಂದು ಒತ್ತಾಯಿಸಬಾರದು. ಒಂದು ವೇಳೆ ಹೀಗೆ ಮಾಡಿದರೆ ಕೊಡವ ಫೋಬಿಯಾವನ್ನು ಪ್ರತಿಬಿಂಬಿಸುತ್ತದೆ. ಅಲ್ಲದೇ ಕೇವಲ ರಶ್ಮಿಕಾ ಅವರ ಸಮುದಾಯದ ಕಾರಣದಿಂದ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅರ್ಥ ಬರುತ್ತದೆ ಎಂದು ಟೀಕಿಸಿದ್ದಾರೆ.

ಯಾರದ್ದೋ ಸೂಚನೆಯಂತೆ ನಡೆದುಕೊಳ್ಳಬೇಕೆಂದು ಒತ್ತಾಯಿಸಬಾರದು. ಒಂದು ವೇಳೆ ಹೀಗೆ ಮಾಡಿದರೆ ಕೊಡವ ಫೋಬಿಯಾವನ್ನು ಪ್ರತಿಬಿಂಬಿಸುತ್ತದೆ. ಅಲ್ಲದೇ ಕೇವಲ ರಶ್ಮಿಕಾ ಅವರ ಸಮುದಾಯದ ಕಾರಣದಿಂದ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅರ್ಥ ಬರುತ್ತದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT