ರಾಜ್ಯ

ಹಾಸನದಲ್ಲಿ ಕಟ್ಟಡ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!

ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ: ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಸಹ ಗಂಭೀರಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಅಂಗಡಿಗಳಿದ್ದ ಹಳೆಯ ಕಟ್ಟಡ ಇದಾಗಿದ್ದು ಇದರಲ್ಲಿ ಅಂಗಡಿಗುತ್ತಿತ್ತು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದಾರೆ. ಈ ವೇಳೆ ಕಟ್ಟಡದ ಸಬ್ಜಾ ಕುಸಿದುಬಿದ್ದಿದೆ. ಇನ್ನು  ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ