ರನ್ಯಾ ರಾವ್ 
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ; ಉದ್ಯಮಿ ಪುತ್ರನ ಬಂಧನ

ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣ ಸಂಬಂಧ ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ