ಎಚ್‌ಕೆ ಪಾಟೀಲ್ 
ರಾಜ್ಯ

ಹಂಪಿ ಗ್ಯಾಂಗ್‌ರೇಪ್: ಪ್ರವಾಸಿಗರ ಭದ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ- ಎಚ್‌.ಕೆ ಪಾಟೀಲ್

ಗುರುವಾರ ರಾತ್ರಿ ಹಂಪಿ ಬಳಿ ಸಂಗೀತ ಕೇಳುತ್ತಾ ಕುಳಿತಿದ್ದಾಗ 27 ವರ್ಷದ ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಬೆಂಗಳೂರು: ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಮಹಿಳೆ ಹಾಗೂ ಹೋಮ್‌ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ನಡೆದಿರುವುದು ದುರದೃಷ್ಟಕರ. ಇಂತಹ ಘಟನೆಗಳು ಮರುಕಳಿಸದಂತೆ ಪ್ರವಾಸಿಗರ ಭದ್ರತೆಯನ್ನು ಬಲಪಡಿಸುವ ಮಾರ್ಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಚರ್ಚಿಸಲು ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಹಿರಿಯ ಅಧಿಕಾರಿಗಳ ಸಭೆ ಕರೆಯುವಂತೆ ಮನವಿ ಮಾಡುವುದಾಗಿ ಪಾಟೀಲ್ ತಿಳಿಸಿದರು.

'ಹಂಪಿ ಮತ್ತು ಸುತ್ತಮುತ್ತ ಇಂತಹ ಅಪರಾಧ ನಡೆದಿರುವುದು ತುಂಬಾ ದುರದೃಷ್ಟಕರ. ವಾಸ್ತವವಾಗಿ, ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸಂತ್ರಸ್ತರಿಗೆ ಧೈರ್ಯ ತುಂಬಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಪ್ರವಾಸಿಗರಿಗೆ ಸೂಕ್ತ ಭದ್ರತೆ ಒದಗಿಸುವ ಕುರಿತು ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ. ಈ ರೀತಿಯ ಘಟನೆಗಳು ಎಂದಿಗೂ ಮರುಕಳಿಸದಂತೆ ನಾವು ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ' ಎಂದು ಸಚಿವರು ಭರವಸೆ ನೀಡಿದರು.

ಹಂಪಿ ಬಳಿಯ ಆನೆಗುಂಡಿ ಪ್ರದೇಶದಲ್ಲಿ ಮಾದಕ ದ್ರವ್ಯ ಮತ್ತು ಗಾಂಜಾ ದುರುಪಯೋಗದ ಆರೋಪದ ಕುರಿತು ಮತ್ತು ಸರ್ಕಾರವು ಭದ್ರತಾ ಕ್ರಮಗಳನ್ನು ಮರುಪರಿಶೀಲಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ಘಟನೆಯು ಭಾವನಾತ್ಮಕವಾಗಿ ನಮಗೆ ಘಾಸಿಯನ್ನುಂಟುಮಾಡಿದೆ. ನಾವು ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ ಮತ್ತು ಹೋಂಸ್ಟೇಗಳು, ರೆಸಾರ್ಟ್‌ಗಳು ಇತ್ಯಾದಿಗಳಲ್ಲಿ ತೆಗೆದುಕೊಂಡಿರುವ ಭದ್ರತೆ ಮತ್ತು ಇತರ ಕ್ರಮಗಳನ್ನು ಮರುಪರಿಶೀಲಿಸುವ ಅಗತ್ಯವಿದ್ದರೆ ಅದನ್ನು ಮಾಡುತ್ತೇವೆ. ಸರ್ಕಾರ ಖಂಡಿತವಾಗಿಯೂ ಅವುಗಳನ್ನು ಪರಿಗಣಿಸುತ್ತದೆ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ' ಎಂದು ಪಾಟೀಲ್ ಹೇಳಿದರು.

ಪೊಲೀಸರ ಪ್ರಕಾರ, ಗುರುವಾರ ರಾತ್ರಿ ಹಂಪಿ ಬಳಿ ಸಂಗೀತ ಕೇಳುತ್ತಾ ಕುಳಿತಿದ್ದಾಗ 27 ವರ್ಷದ ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಪ್ರವಾಸಿಗರ ಮೇಲೂ ಹಲ್ಲೆ ನಡೆಸಿ ಕಾಲುವೆಗೆ ತಳ್ಳಲಾಗಿದೆ ಮತ್ತು ಅವರಲ್ಲಿ ಒಬ್ಬನ ಮೃತ ದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧದಲ್ಲಿ ಭಾಗಿಯಾಗಿರುವ ಮೂವರು ಪುರುಷರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT