ರನ್ಯಾ ರಾವ್ 
ರಾಜ್ಯ

ರನ್ಯಾ ರಾವ್ ಗೆ ದೈಹಿಕವಾಗಿ ಹಲ್ಲೆ ಮಾಡಲಾಗಿದೆಯೇ? ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ನಟಿ! ಹೇಳಿದ್ದು ಹೀಗೆ...

ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಕಸ್ಟಡಿಯಲ್ಲಿದ್ದಾಗ ತನಗೆ ಬೈಗುಳದ ಕಿರುಕುಳ ನೀಡುವ ಮೂಲಕ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಆಘಾತಕ್ಕೊಳಗಾಗಿದ್ದು, ತೀವ್ರವಾಗಿ ನೊಂದಿದ್ದೇನೆ.

ಬೆಂಗಳೂರು: ಕಳೆದ ವಾರ ದುಬೈನಿಂದ ಅಕ್ರಮವಾಗಿ 14. 56 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರ ಕೆನ್ನೆ ಊದಿಕೊಂಡಿದ್ದು, ಅವರ ಮೇಲೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆಯೇ ಎಂಬಂತಹ ಅನುಮಾನಗಳು ಹುಟ್ಟಿಕೊಂಡಿತ್ತು.

ಈ ಕುರಿತ ಪ್ರಶ್ನೆಗೆ ಇಂದು ಬೆಂಗಳೂರು ವಿಶೇಷ ನ್ಯಾಯಾಲಯದ ಮುಂದೆ ಕಣ್ಣೀರಿಟ್ಟ ರನ್ಯಾ ರಾವ್, ತಾನು ಬೈಗುಳದ ಕಿರುಕುಳದಿಂದ ಅಘಾತಗೊಂಡಿರುವುದಾಗಿ ಹೇಳಿಕೆ ನೀಡಿರುವುದಾಗಿ NDTV ವರದಿ ಮಾಡಿದೆ.

ಹೌದು. ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಕಸ್ಟಡಿಯಲ್ಲಿದ್ದಾಗ ತನಗೆ ಬೈಗುಳದ ಕಿರುಕುಳ ನೀಡುವ ಮೂಲಕ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಆಘಾತಕ್ಕೊಳಗಾಗಿದ್ದು, ತೀವ್ರವಾಗಿ ನೊಂದಿರುವುದಾಗಿ ತಿಳಿಸಿದರು.

ದುಬೈನಿಂದ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು.

ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರ ಮಲಮಗಳಾದ ರನ್ಯಾ ಅವರನ್ನು ಆರ್ಥಿಕ ಅಪರಾಧಕ್ಕಾಗಿ ಮಾರ್ಚ್ 4 ರಂದು ಸಂಜೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ಇಲ್ಲಿವರೆಗೂ ನ್ಯಾಯಾಂಗ ಬಂಧನ ವಿಧಿಸಿತ್ತು.

ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT