ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಬಜೆಟ್ ನಲ್ಲಿ ನಿರ್ಲಕ್ಷ: ತೆರಿಗೆ ಪಾವತಿ ನಿಲ್ಲಿಸುವುದಾಗಿ ಖಾಸಗಿ ವಾಹನ ಚಾಲಕರ ಎಚ್ಚರಿಕೆ

"ಅಪಘಾತಗಳನ್ನು ತಪ್ಪಿಸಲು ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ನಾವು ವಿನಂತಿಸಿದ್ದೇವೆ. ವಾಹನಗಳ ಬಾಡಿಗೆ ದರಗಳನ್ನು ಏಕರೂಪವಾಗಿ ನಿಗದಿಪಡಿಸಬೇಕು, ಒಂದು ನಗರ, ಒಂದು ದರ ಜಾರಿಗೆ ತರಬೇಕು ಎಂದು ನಾವು ಒತ್ತಾಯಿಸಿದ್ದೇವೆ"

ಬೆಂಗಳೂರು: ಖಾಸಗಿ ವಾಣಿಜ್ಯ ವಾಹನ ಚಾಲಕರು ಮತ್ತು ಮಾಲೀಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ವಾಹನ ಚಾಲಕರ ಕಾರ್ಮಿಕ ಸಂಘ ಮತ್ತು ಸ್ನೇಹಜೀವಿ ಚಾಲಕರ ಕಾರ್ಮಿಕ ಸಂಘದ ಪ್ರತಿನಿಧಿಗಳು ಸಾರಿಗೆ ಇಲಾಖೆ ರಾಜ್ಯ ಸರ್ಕಾರಕ್ಕೆ ಆದಾಯ ತರುವ ಪ್ರಮುಖ ವಲಯಗಳಲ್ಲಿ ಒಂದಾಗಿದೆ. ಆದರೆ ಬಜೆಟ್‌ನಲ್ಲಿ ಇದನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

“ಚಾಲಕರು ಮತ್ತು ಮಾಲೀಕರ ಸಮುದಾಯದ ಭಾಗವಾಗಿ, ನಾವು ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿಗೆ ಅನೇಕ ಸಲಹೆಗಳನ್ನು ನೀಡಿದ್ದೇವೆ. ಆದಾಗ್ಯೂ, ನಮ್ಮ ಯಾವುದೇ ಬೇಡಿಕೆಗಳು ಬಜೆಟ್‌ನಲ್ಲಿ ಈಡೇರಿಸಿಲ್ಲ” ಎಂದು ಭಾರತೀಯ ವಾಹನ ಚಾಲಕರ ಸಂಘದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.

ಚಾಲಕರ ಹಾಗೂ ಮಾಲೀಕರ ಪ್ರತಿನಿಧಿಗಳು ಮುಖ್ಯಮಂತ್ರಿಗೆ ಶಿಫಾರಸು ಮಾಡಿದ ಪ್ರಮುಖ ಸಲಹೆಗಳಲ್ಲಿ ಹೆದ್ದಾರಿಗಳಲ್ಲಿ ಪ್ರತಿ 100 ಕಿ.ಮೀ.ಗೆ ಚಾಲಕರಿಗೆ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸುವುದು, ಆಂಬ್ಯುಲೆನ್ಸ್ ಸೌಲಭ್ಯ, ಲಾರಿಗಳಿಂದ ಇಂಧನ ಕಳ್ಳತನ ತಡೆಗಟ್ಟಲು ಕ್ರಮ ಮತ್ತು ಪೊಲೀಸ್ ಗಸ್ತು ಹೆಚ್ಚಿಸುವ ಮೂಲಕ ಚಾಲಕರ ದರೋಡೆಗಳನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲಕರಿಗಾಗಿ ಇನ್ನೂ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಬೇಕು ಮತ್ತು ಒಂದು ದಿನವನ್ನು 'ಚಾಲಕರ ದಿನ' ಎಂದು ಗುರುತಿಸಬೇಕು ಎಂದು ಅವರು ವಿನಂತಿಸಿದ್ದರು.

"ಅಪಘಾತಗಳನ್ನು ತಪ್ಪಿಸಲು ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ನಾವು ವಿನಂತಿಸಿದ್ದೇವೆ. ವಾಹನಗಳ ಬಾಡಿಗೆ ದರಗಳನ್ನು ಏಕರೂಪವಾಗಿ ನಿಗದಿಪಡಿಸಬೇಕು, ಒಂದು ನಗರ, ಒಂದು ದರ ಜಾರಿಗೆ ತರಬೇಕು ಎಂದು ನಾವು ಒತ್ತಾಯಿಸಿದ್ದೇವೆ" ಎಂದು ಸ್ವಾಮಿ ಹೇಳಿದರು.

ತೆರಿಗೆ ಪಾವತಿ ನಿಲ್ಲಿಸುವ ಮೂಲಕ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಚಳುವಳಿ ಆರಂಭಿಸುವುದಾಗಿ ಒಕ್ಕೂಟ ಎಚ್ಚರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ತೀವ್ರ ಹಿನ್ನಡೆ: ಇರಾನ್ ವಿರುದ್ಧ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ!

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು..': Mojtaba Khamenei ಎಚ್ಚರಿಕೆ

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು..' 'ಇದೊಂದರಿಂದ ಅವಮಾನವಾಗುತ್ತಿದೆ'..: ಗೀತ ರಚನೆಕಾರ ಶಾಕಿಂಗ್ ಹೇಳಿಕೆ

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

SCROLL FOR NEXT