ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್, ಸಿಎಂ ಸಿದ್ದರಾಮಯ್ಯ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಈ ಪ್ರಕರಣ ಈಗ ಸಿಎಂ ಮನೆಬಾಗಿಲು ತಲುಪಿದೆ ಎಂದು ಹೇಳಿದ್ದಾರೆ.
"ಕಾಂಗ್ರೆಸ್ ಗೋಲ್ಡ್ ಫೀಲ್ಡ್" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಫೋಟೋ ಹಂಚಿಕೊಂಡಿರುವ ಮಾಳವಿಯಾ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಬಾಗಿಲು ತಲುಪಿದೆ. ಈ ದಿನಾಂಕದ ಫೋಟೋದಲ್ಲಿ ಗೃಹ ಸಚಿವ ಜಿ ಪರಮೇಶ್ವರ ಕೂಡ ಇದ್ದಾರೆ ಎಂದಿದ್ದಾರೆ.
ಇಂತಹ ರಾಜಕೀಯ ಲಿಂಕ್‌ಗಳನ್ನು ಬಿಡುತ್ತಿರುವ ವ್ಯಕ್ತಿ ಬೇರೆ ಯಾರೂ ಅಲ್ಲ, ಸಿಎಂ ಹುದ್ದೆಗಾಗಿ ಕಾಯುತ್ತಿರುವ ಡಿಕೆ ಶಿವಕುಮಾರ್ ಎಂದಿದ್ದಾರೆ.
ಮಂಗಳವಾರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ರಾಜ್ಯ ಸರ್ಕಾರದಿಂದ ಯಾರೂ ಈ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದರು.