ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಡಗು: ಜಿಲ್ಲೆಯ ಹಲವೆಡೆ ಲಘು ಭೂಕಂಪನದ ಅನುಭವ

ರಿಕ್ಟರ್ ಮಾಪಕದಲ್ಲಿ ಸುಮಾರು 1.6 ರಷ್ಟು ಪ್ರಮಾಣದಲ್ಲಿ ಭೂಕಂಪನ ದಾಖಲಾಗಿದೆ. ಇಂದು ಬೆಳಗ್ಗೆ 10.49ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಮಡಿಕೇರಿಯ ಸಾಂದರ್ಭಿಕ ಚಿತ್ರ
Nagaraja AB
Updated On : 12 Mar 2025, 5:26 pm

ಬೆಂಗಳೂರು: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ 1.6 ತೀವ್ರತೆಯ ಲಘು ಭೂಕಂಪದ ಅನುಭವಾಗಿದೆ. ಮದೆ‌ನಾಡು ಗ್ರಾಮ ಪಂಚಾಯಿತಿಯ ವಾಯವ್ಯ ದಿಕ್ಕಿನಲ್ಲಿ 2.4 ಕಿಮೀ ದೂರದ 5 ಕಿಮೀ ಆಳವನ್ನು ಭೂಕಂಪದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ ಸುಮಾರು 1.6 ರಷ್ಟು ಪ್ರಮಾಣದಲ್ಲಿ ಭೂಕಂಪನ ದಾಖಲಾಗಿದೆ. ಇಂದು ಬೆಳಗ್ಗೆ 10.49ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಮದೆನಾಡು ಸುತ್ತಮುತ್ತಲಿನ 15 ರಿಂದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಯಾವುದೇ ಹಾನಿಯಾಗಿಲ್ಲ KSNDMC ಎಂದು ಮಾಹಿತಿ ನೀಡಿದೆ.

Advertisement

Advertisement

ಕೊಡಗಿನಲ್ಲಿ 2018 ಹಾಗೂ ಕಳೆದ ವರ್ಷವೂ ಸಹ ಭೂಕಂಪನದ ಅನುಭವಾಗಿತ್ತು.

Also Read

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement