ಬೆಂಗಳೂರಿನ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಮತ್ತು ಎಂಎಲ್‌ಸಿಗಳು ಪ್ರತಿಭಟನೆ ನಡೆಸಿದರು. 
ರಾಜ್ಯ

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ: ಎರಡನೇ ದಿನವೂ ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ

ಸರ್ಕಾರ ಮತ್ತು ವಿರೋಧ ಪಕ್ಷಗಳು ಸಮಸ್ಯೆಯನ್ನು ಪರಿಹರಿಸಿ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸ್ಪೀಕರ್ ಯುಟಿ ಖಾದರ್ ಒತ್ತಾಯಿಸಿದರು. ನಾನು ಇದನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡಕ್ಕೂ ಹೇಳುತ್ತಿದ್ದೇನೆ ಎಂದರು.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ಬುಧವಾರವೂ ವಿಧಾನಸಭೆ ಕಲಾಪಕ್ಕೆ ಅಡ್ಡಿಯುಂಟಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನಾಗಿ ನೇಮಿಸುವ ಮೂಲಕ ಸರ್ಕಾರ ಶಾಸಕರ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಈ ಪಕ್ಷದ ಕಾರ್ಯಕರ್ತರಿಗೆ ಗೌರವಧನ ನೀಡಲು ರಾಜ್ಯದ ಬೊಕ್ಕಸದಿಂದ ಹಣ ಬಳಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದವು.

ಸರ್ಕಾರವು ಕೂಡಲೇ ಈ ಎಲ್ಲ ಸಮಿತಿಗಳನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಮಂಗಳವಾರ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ಒಂದು ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮೇಲ್ವಿಚಾರಣೆ ಅಗತ್ಯವಿದ್ದರೆ, ಈ ಸಮಿತಿಗಳ ನೇತೃತ್ವವನ್ನು ಶಾಸಕರಿಗೆ ವಹಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪರಿಶೀಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದರು.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮುಂದುವರೆಸಿದರು. ಸರ್ಕಾರ ಮತ್ತು ವಿರೋಧ ಪಕ್ಷಗಳು ಸಮಸ್ಯೆಯನ್ನು ಪರಿಹರಿಸಿ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸ್ಪೀಕರ್ ಯುಟಿ ಖಾದರ್ ಒತ್ತಾಯಿಸಿದರು. ನಾನು ಇದನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡಕ್ಕೂ ಹೇಳುತ್ತಿದ್ದೇನೆ ಎಂದರು.

ಸರ್ಕಾರದ ಈ ಕ್ರಮವನ್ನು ಟೀಕಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಇಒ (ಕಾರ್ಯನಿರ್ವಾಹಕ ಅಧಿಕಾರಿ) ಮತ್ತು ತಹಶೀಲ್ದಾರ್ ಅವರ ವೇತನವನ್ನು ಕಡಿತಗೊಳಿಸುವ ಮೂಲಕ ಸರ್ಕಾರವು ಅವರ ಮೇಲೆ ನಂಬಿಕೆ ಹೊಂದಿಲ್ಲ. ಹೀಗಾಗಿ ಖಾತರಿ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಕಾಂಗ್ರೆಸ್ ಕಾರ್ಯಕರ್ತರನ್ನು ಒಳಗೊಂಡ ಸಮಿತಿಗಳಿಗೆ ವಹಿಸಿದೆ ಎಂದು ದೂರಿದರು.

'ನೀವು (ಸರ್ಕಾರ) ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಅಧ್ಯಕ್ಷರಿಗೆ ನೀಡುತ್ತಿರುವ 25,000 ರೂ. ಮತ್ತು 40,000 ರೂ. ಸಂಬಳವನ್ನು ಅವರ (ಇಒ ಮತ್ತು ತಹಶೀಲ್ದಾರ್) ಸಂಬಳದಿಂದ ಕಡಿತಗೊಳಿಸಿದ್ದೀರಿ. ತೆರಿಗೆದಾರರ ಹಣವನ್ನು ಬಳಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರಿಗೆ ಪಾವತಿಸಲು ಸರ್ಕಾರಕ್ಕೆ ನಾಚಿಕೆಯಾಗಬೇಕು' ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಈ ಪ್ರತಿಭಟನೆಯು 'ಖಾತರಿ ಯೋಜನೆಗಳ ವಿರೋಧಿ'ಯಾಗಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, 'ವಿರೋಧ ಪಕ್ಷವು ಸದನ ಸುಗಮವಾಗಿ ನಡೆಯಬೇಕು ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕೆಂದು ಬಯಸುತ್ತದೆ. ಸರ್ಕಾರ ಆರ್ಥಿಕ ಒತ್ತಡದಲ್ಲಿದೆ. ಆದ್ದರಿಂದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಯೋಜಿಸುತ್ತಿದೆ. ಸರ್ಕಾರಕ್ಕೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಂಬಳ ಹೆಚ್ಚಿಸಲು, ಹಾಲಿನ ಸಬ್ಸಿಡಿಗಳನ್ನು ಪಾವತಿಸಲು, ಅತಿಥಿ ಉಪನ್ಯಾಸಕರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಪಾವತಿಸಲು ರಾಜ್ಯದ ಖಜಾನೆಯಿಂದ ಹಣವನ್ನು ಬಳಸುತ್ತಿದ್ದಾರೆ' ಎಂದು ಆರೋಪಿಸಿದರು.

ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆಯನ್ನು ನಿಲ್ಲಿಸುವಂತೆ ಸ್ಪೀಕರ್ ಖಾದರ್ ಪದೇ ಪದೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಿದರು.

ಖಾತರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆಗೆ ಸ್ಥಾಪಿಸಿರುವ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರು ಮತ್ತು ಐದು ಉಪಾಧ್ಯಕ್ಷರಿಗೆ ಸಂಪುಟ ಸಚಿವರು ಮತ್ತು ರಾಜ್ಯ ಸಚಿವರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳ ಅಧ್ಯಕ್ಷರಿಗೆ ಕ್ರಮವಾಗಿ 40,000 ಮತ್ತು 25,000 ರೂ.ಗಳ ಮಾಸಿಕ ಗೌರವ ಧನ ನೀಡಲಾಗುತ್ತಿದೆ. ಜಿಲ್ಲಾ ಸಮಿತಿ ಉಪಾಧ್ಯಕ್ಷರಿಗೆ ಮಾಸಿಕ 10,000 ರೂ. ಗೌರವ ಧನ ನೀಡಲಾಗುತ್ತಿದ್ದರೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳ ಸದಸ್ಯರಿಗೆ ಕ್ರಮವಾಗಿ 1,100 ರೂ. ಮತ್ತು 1,000 ರೂ.ಗಳನ್ನು ಸಭಾ ಶುಲ್ಕವಾಗಿ ನೀಡಲಾಗುತ್ತಿದೆ.

ರಾಜ್ಯ ಮಟ್ಟದ ಸಮಿತಿಯಲ್ಲಿ ಒಬ್ಬ ಅಧ್ಯಕ್ಷರು, ಐದು ಉಪಾಧ್ಯಕ್ಷರು ಮತ್ತು 31 ಸದಸ್ಯರು ಇದ್ದಾರೆ. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಒಬ್ಬ ಅಧ್ಯಕ್ಷರು, ಐದು ಉಪಾಧ್ಯಕ್ಷರು ಮತ್ತು 15 ಸದಸ್ಯರು ಇದ್ದಾರೆ. ಅದೇ ರೀತಿ ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಒಬ್ಬ ಅಧ್ಯಕ್ಷರು ಮತ್ತು 14 ಸದಸ್ಯರು ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT